Karnataka ದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ!

Karnataka ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.
1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಸೆಕ್ಷನ್ 30(2)(a) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ, 2011ರ ನಿಯಮ 2.3.4ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : ಭಾರತದಲ್ಲಿ Telegram ಗೆ ತಾತ್ಕಾಲಿಕ ನಿಷೇಧ..!!

ಪಾನ್ ಮಸಾಲಾಗಳಿಗೆ ಸೀಮಿತವಾಗಿಲ್ಲ
ನಿಷೇಧವು ಕೇವಲ ಸಿದ್ಧ ಗುಟ್ಕಾ ಅಥವಾ ಪಾನ್ ಮಸಾಲಾಗಳಿಗೆ ಸೀಮಿತವಾಗಿಲ್ಲ. ತಂಬಾಕು ಅಥವಾ ನಿಕೋಟಿನ್ ಅನ್ನು ಪ್ರತ್ಯೇಕ ಪ್ಯಾಕೆಟ್ಗಳಲ್ಲಿ ಮಾರಾಟ ಮಾಡಿ, ಗ್ರಾಹಕರು ನಂತರ ಅವುಗಳನ್ನು ಸುಲಭವಾಗಿ ಮಿಶ್ರಣ ಮಾಡಿಕೊಂಡು ಸೇವಿಸುವಂತೆ ಮಾಡುವ ಉತ್ಪನ್ನಗಳಿಗೂ ಇದು ಅನ್ವಯವಾಗಲಿದೆ.

ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ
ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದೆ.
ಇದನ್ನು ನೋಡಿ : ಗಂಡನ ಮನೆಯವರ ಕಿರುಕುಳಕ್ಕೆ ಮಹಿಳೆ ಸಾ* – ಗಂಡನ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ





