Hardik Pandya : ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..!

ಮುಂದಿನ ತಿಂಗಳು ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಗೆ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯೊಂದು ಎದುರಾದಂತಿದೆ. ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಗಾಯದ ಸಮಸ್ಯೆಯಿಂದ ಹಾರ್ದಿಕ್ ಸಂಕಷ್ಟ
ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿದ್ದ ವೇಳೆ ಹಾರ್ದಿಕ್ ಪಾಂಡ್ಯಗೆ ಕ್ವಾಡ್ರೈಸೆಪ್ಸ್ ಗಾಯ ಉಂಟಾಗಿತ್ತು. ಈ ಗಾಯದಿಂದ ಇನ್ನೂ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎನ್ನಲಾಗುತ್ತಿದೆ. ಆರಂಭದಲ್ಲಿ ಹಾರ್ದಿಕ್ ಮೂರು ವಾರಗಳಲ್ಲಿ ಚೇತರಿಸಿಕೊಳ್ಳಬಹುದು ಎಂದು ವೈದ್ಯಕೀಯ ತಂಡ ನಿರೀಕ್ಷಿಸಿತ್ತು.
ಆದರೆ ಗಾಯದ ಗಂಭೀರತೆ ಹೆಚ್ಚಿರುವ ಕಾರಣ ಚೇತರಿಕೆಗೆ ಇನ್ನಷ್ಟು ಸಮಯ ಬೇಕಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಗಾಯದ ಕಾರಣದಿಂದಲೇ Hardik Pandya ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಇಂಗ್ಲೆಂಡ್ ಸರಣಿಯಲ್ಲೂ ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತವಾಗುವ ಸಾಧ್ಯತೆ ಇದೆ.
ಇದನ್ನು ಓದಿ : ರಾಷ್ಟ್ರಧ್ವಜಕ್ಕೆ ಅವಮಾನ – Hardik Pandya ವಿರುದ್ಧ ದೂರು!

ಕಿಂಗ್ ಕೊಹ್ಲಿ ಕಂಬ್ಯಾಕ್?
ಇನ್ನೊಂದೆಡೆ, ಐಪಿಎಲ್ 2026ರ ಫೈನಲ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದ ವಿರಾಟ್ ಕೊಹ್ಲಿ ಚೇತರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಿಸಿಸಿಐ ಫಿಟ್ನೆಸ್ ಕ್ಲಿಯರೆನ್ಸ್ ಪಡೆದರೆ ಅವರು ಇಂಗ್ಲೆಂಡ್ ಸರಣಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಅಫ್ಘಾನಿಸ್ತಾನ ಸರಣಿಯಲ್ಲಿ ಯುವ ಆಟಗಾರರಿಗೆ ಅವಕಾಶ
ಕೊಹ್ಲಿ ಹಾಗೂ ಹಾರ್ದಿಕ್ ಅನುಪಸ್ಥಿತಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಜೈಸ್ವಾಲ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರೆ, ಗಾಯದಿಂದ ಚೇತರಿಸಿಕೊಂಡಿದ್ದ ಹರ್ಷಿತ್ ರಾಣಾಗೆ ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತ ತಂಡ ಯಾವ ರೀತಿಯ ಸಂಯೋಜನೆಯೊಂದಿಗೆ ಇಂಗ್ಲೆಂಡ್ ಸರಣಿಗೆ ಇಳಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನು ನೋಡಿ : MADHUGIRI ಅಭಿವೃದ್ದಿಗೆ ಅಧಿಕಾರ ಅಗತ್ಯ – ಅಧಿಕಾರದ ಅಸೆ ಬಿಚ್ಚಿಟ್ರಾ TUMUL ನಿರ್ದೇಶಕ




