ದಳಪತಿ Vijay ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಬಿಡುಗಡೆ ಭಾಗ್ಯ?

ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಚಿತ್ರದ ಬಿಡುಗಡೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿದ್ದು, ಚಿತ್ರ ಜುಲೈ 24, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಹೊರಬಿದ್ದಿದೆ.

ಯಾವಾಗ ಸಿನಿಮಾ ತೆರೆಗೆ?
ವರದಿಗಳ ಪ್ರಕಾರ, ಚಿತ್ರದ ನಿಗದಿತ ಬಿಡುಗಡೆ ದಿನಾಂಕವನ್ನು ವಿದೇಶಿ ವಿತರಕರಿಗೆ ಚಿತ್ರತಂಡ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಜುಲೈ 24ರಂದು ಸಿನಿಮಾ ತೆರೆಗೆ ಬರುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ ಚಿತ್ರತಂಡದಿಂದ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಮುಖ್ಯ ಪಾತ್ರದಲ್ಲಿ ಪ್ರಿಯಾಮಣಿ ಹಾಗೂ ಪ್ರಕಾಶ್ ರಾಜ್
ರಾಜಕೀಯ ಆಕ್ಷನ್-ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹೆಚ್. ವಿನೋದ್ ನಿರ್ದೇಶಿಸಿದ್ದಾರೆ. ವಿಜಯ್ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಮಮಿತಾ ಬೈಜು, ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ ಹಾಗೂ ನರೇನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ : ‘Jana Nayagan’ ಸಿನಿಮಾಗಾಗಿ ಕಾದಿದ್ದ ಅಭಿಮಾನಿಗಳಿಗೆ ದೊಡ್ಡ ಶಾಕ್

ದಳಪತಿ Vijay ಕೊನೆ ಸಿನಿಮಾ
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದು, ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ರಾಜಕೀಯ ಪ್ರವೇಶದ ಬಳಿಕ ವಿಜಯ್ ನಟಿಸುತ್ತಿರುವ ಕೊನೆಯ ಸಿನಿಮಾ ಎಂಬ ಕಾರಣಕ್ಕೂ ‘ಜನ ನಾಯಗನ್’ ವಿಶೇಷ ಕುತೂಹಲ ಮೂಡಿಸಿದೆ.

ಆಗಸ್ಟ್ 26ರಂದು ಟಾಕ್ಸಿಕ್ ತೆರೆಗೆ
ಇದೇ ವೇಳೆ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಆಗಸ್ಟ್ 26ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ‘ಜನ ನಾಯಗನ್’ ಚಿತ್ರಕ್ಕೆ ಕನಿಷ್ಠ ಎರಡು ತಿಂಗಳ ಪ್ರದರ್ಶನಾವಕಾಶ ದೊರಕುವಂತೆ ಬಿಡುಗಡೆ ದಿನಾಂಕವನ್ನು ಮೊದಲೇ ನಿಗದಿಪಡಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನು ನೋಡಿ : KUMARASWAMY ಮನುಷ್ಯನೇನ್ರಿ ಅವ್ರು..! – HDK ವಿರುದ್ಧ VASANNA ಫುಲ್ ಗರಂ




