Mysore ರಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ವಂಚಿತರಾದ ಕಾಂಗ್ರೆಸ್ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ
ಮಾಜಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ತನ್ವೀರ್ ಸೇಠ್ ಅವರು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸಭೆ ನಡೆಸಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮೂವರು ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಇದನ್ನು ಓದಿ : ನೂತನ ಸಚಿವರಿಗೆ ಇವತ್ತೇ ಖಾತೆ ಹಂಚಿಕೆ ಮಾಡುತ್ತೇವೆ – CM

ಸಿದ್ದರಾಮಯ್ಯ ಬಣದಲ್ಲಿ ಭಿನ್ನಮತವೇ?
ಹೆಚ್.ಸಿ. ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಯಕರು. ಮತ್ತೊಂದೆಡೆ, ತನ್ವೀರ್ ಸೇಠ್ ಅವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಗುರುತಿಸಿಕೊಂಡಿರುವ ನಾಯಕರಾಗಿದ್ದಾರೆ.
Mysore – ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದು ಟೀಂ?
ಈ ಹಿನ್ನೆಲೆಯಲ್ಲಿ ಮೂವರು ನಾಯಕರ ಸಭೆ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗಿದೆಯೇ ಎಂಬ ಚರ್ಚೆ ಆರಂಭವಾಗಿದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ಬಣ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನು ನೋಡಿ : ಅಧಿವೇಶನದೊಳಗೆ ಎಲ್ಲವೂ ಫೈನಲ್ – CM DKS ಕೊಟ್ರು BIG UPDATE.!




