ಕ್ಯಾಂಟರ್ ಡಿಕ್ಕಿ – ಸಾರಿಗೆ ಬಸ್ ಟಿಕೆಟ್ ಚೆಕಿಂಗ್ಗೆ ಬಂದಿದ್ದ TC ದುರ್ಮರಣ.

ಕರ್ತವ್ಯದಲ್ಲಿದ್ದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ಆರ್ಟಿಸಿ ಬಸ್ಸಿನ ಚೆಕ್ಕಿಂಗ್ ಇನ್ಸ್ ಪೆಕ್ಟರ್ ರೊಬ್ಬರು ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚನ್ನಹಳ್ಳಿ ಬಳಿ ನಡೆದಿದೆ. ಇನ್ನು ಅಪಘಾತದಲ್ಲಿ KSRTC ಚೆಕ್ಕಿಂಗ್ ಇನ್ಸ್ ಪೆಕ್ಟರ್ ಶಕುನಿಗೌಡ ಎಂಬುವವರು ಮೃತಪಟ್ಟಿದ್ದಾರೆ.

ಟಿಕೆಟ್ ಚೆಕ್ ಮಾಡುವ ವೇಳೆ ಅಪಘಾತ
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ,TC ಶಕುನಿಗೌಡ ಅವರು ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಇದನ್ನು ಓದಿ : Kantara 1 ದಾಖಲೆ ಮುರಿಯಲು ರೆಡಿ ಆದ ಧುರಂಧರ್
ಏಕಾಏಕಿ ವೇಗವಾಗಿ ಬಂದ ಲಾರಿ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲು
ಇನ್ನು ವಿಷಯ ತಿಳಿದು ಆಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು, ಪರಾರಿಯಾದ ಚಾಲಕನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಒಂಟಿ ಮಹಿಳೆಯ ಮನೆಗೆ ನುಗ್ಗಿದ್ರು ಖದೀಮರು – 3 KG ಚಿನ್ನ ಕದ್ದು ಖತರ್ನಾಕ್ ಕಳ್ಳರು ಎಸ್ಕೇಪ್..?




