HAVERI : ಸಾವಯವ ಕೃಷಿಗೆ ಮಾರುಕಟ್ಟೆ ಬಲ – ಅ.4ರಂದು ಬ್ಯಾಡಗಿಯಲ್ಲಿ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಕುರಿತು ಚರ್ಚಿಸಲು ಅ.4ರಂದು ಬ್ಯಾಡಗಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜಿಸಲಾಗಿದೆ.
ರೈತರೇ ಉತ್ಪನ್ನಗಳನ್ನು ಮಾರಾಟ ಮಾಡುವ ಕುರಿತು ಮಾಹಿತಿ
ಹೌದು.. ಅಕ್ಟೋಬರ್ 4ರಂದು ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಈ ಕಾರ್ಯಾಗಾರ ನಡೆಯಲಿದ್ದು, ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸೋದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ. ಸಾವಯವ ಉತ್ಪನ್ನಗಳ ಮಾರಾಟ, ಮಾರುಕಟ್ಟೆ ಅವಕಾಶಗಳು ಹಾಗೂ ಮಧ್ಯವರ್ತಿಗಳ ಅವಲಂಬನೆಯಿಲ್ಲದೆ ರೈತರೇ ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ರೈತ ಸಂಘದ ಹಾನಗಲ್ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ಹೇಳಿದ್ರು.
READ THIS : ಸರ್ಕಾರಿ ಜಮೀನಿಗೂ ಬೆಳೆವಿಮೆ ಪರಿಹಾರ – ರೈತರ ಹೆಸರಲ್ಲಿ ಲಕ್ಷ ಲಕ್ಷ ಲೂಟಿ?

ಕಾರ್ಯಾಗಾರ ಆಯೋಜಿಸಿರುವುದೇಕೆ?
ಇನ್ನು ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳಿಗೆ ನಿರೀಕ್ಷಿತ ಬೆಲೆ ಸಿಗದಿರುವುದು ರೈತರ ಪ್ರಮುಖ ಸಮಸ್ಯೆಯಾಗಿದೆ. ಹೀಗಾಗಿ ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗುವಂತೆ ಪರಿಣಾಮಕಾರಿ ಮಾರುಕಟ್ಟೆ ವ್ಯವಸ್ಥೆ ರೂಪಿಸಬೇಕು. ‘ನಮ್ಮ ಬೆಳೆ, ನಮ್ಮ ಬೆಲೆ, ನೇರ ಮಾರುಕಟ್ಟೆ’ ಅನ್ನೋ ಆಶಯದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ.
ಆರೋಗ್ಯಕರ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿ
ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಿ ಆರೋಗ್ಯಕರ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ಸಾವಯವ ಹಾಗೂ ನೈಸರ್ಗಿಕ ಕೃಷಿ ಮಾಡುವ ರೈತರಿಗೆ ಸೂಕ್ತ ಪ್ರೋತ್ಸಾಹದ ಜೊತೆಗೆ ಅವರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು ಎಂದು ಅವರು ತಿಳಿಸಿದ್ರು.
ಇನ್ನು ಈ ವೇಳೆ ರೈತ ಸಂಘದ ಮುಖಂಡರಾದ ಅಡಿವೆಪ್ಪ ಅಲದಕಟ್ಟಿ, ಮೂಕಯ್ಯ ಗುರುಲಿಂಗಮ್ಮನವರ, ಗುಲಾಮಸಾಬ್ ಬಡಗಿ ಹಾಗೂ ಸೋಮಣ್ಣ ಜಡೆಗೊಂಡರ ಉಪಸ್ಥಿತರಿದ್ದರು.

MUST WATCH : ನೈಸ್ ರಸ್ತೆಗೆ ಜಮೀನು ನೀಡಿದ ವಿಚಾರ – ಸಿಎಂ ಭೇಟಿಯ ಗುಟ್ಟು ಬಿಚ್ಚಿಟ್ಟ ಸಿದ್ದಲಿಂಗ ಶ್ರೀ



