Haveri ಜಿಲ್ಲೆಯ ಶಿಗ್ಗಾವಿಯಲ್ಲಿ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಅಕ್ಕನನ್ನು ತಮ್ಮ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಸಂಪೂರ್ಣ ವಿವರಗಳು ಮತ್ತು ಪೊಲೀಸ್ ತನಿಖೆ ಮಾಹಿತಿ ಇಲ್ಲಿದೆ.

Haveri ಜಿಲ್ಲೆಯ ಶಿಗ್ಗಾವಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪರಪುರುಷನ ಜೊತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಅಕ್ಕನನ್ನು ತಮ್ಮನೇ ಅಂಗನವಾಡಿಯಲ್ಲಿಯೇ ಭೀಕರವಾಗಿ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಸುಮಾ ಶಿವಶಂಕರ್ ವನಹಳ್ಳಿ (29) ಎಂದು ಗುರುತಿಸಲಾಗಿದ್ದು, ಅವರು ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡುತ್ತಿದ್ದರು.
MUST READ : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ!

ಬೆಳಗ್ಗೆ ಸುಮಾರು 10:15ಕ್ಕೆ ಈ ಘಟನೆ ನಡೆದಿದ್ದು, ಮೃತಳ ತಮ್ಮ ಸಂಜು ಮಚ್ಚಿನಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ ಕುತ್ತಿಗೆ ಮತ್ತು ಕೈಗೆ ತೀವ್ರವಾಗಿ ಹಲ್ಲೆ ಮಾಡಲಾಗಿದ್ದು, ಕೈ ಕತ್ತರಾಗಿ ಗಂಭೀರ ಗಾಯಗಳಾಗಿವೆ. ತೀವ್ರ ರಕ್ತಸ್ರಾವದಿಂದ ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಶಿಗ್ಗಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಲಾಗಿದೆ. ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದೆ.
MUST WATCH : PETROL , DIESEL ದರ ಮತ್ತೆ ಏರಿಕೆ ಇಂದಿನ ರೇಟ್ ಕೇಳಿದ್ರೆ ಶಾಕ್ ಆಗ್ತೀರಾ




