CM ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ HDK ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಜಕೀಯ ಜಿದ್ದಾಜಿದ್ದಿ ಮತ್ತು ಹಳೆಯ ವೈಷಮ್ಯಗಳನ್ನು ಬದಿಗಿಟ್ಟು, ‘ಎಕ್ಸ್’ ಮೂಲಕ ಶುಭಾಶಯ ಕೋರಿರುವ ಅವರು, ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುವಂತೆ ಸಲಹೆ ನೀಡಿದ್ದಾರೆ.
HDK ಪೋಸ್ಟ್ನಲ್ಲಿ ಏನಿದೆ?
“ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.” ಎಂದು ಕೇಂದ್ರ ಸಚಿವರು ಬರೆದುಕೊಂಡಿದ್ದಾರೆ.
ಇದನ್ನು ಓದಿ : ತುಮಕೂರಿನಲ್ಲಿ ದಳಪತಿ ಅಬ್ಬರ – ಮುಂದಿನ ಸಿಎಂ HDK ನೇ ಅಂದ್ರು
ಪರಸ್ಪರ ರಾಜಕೀಯ ಎದುರಾಳಿಗಳು
ಕನಕಪುರ ಹಾಗೂ ರಾಮನಗರ ಭಾಗದ ರಾಜಕಾರಣದಲ್ಲಿ ದೀರ್ಘಕಾಲದಿಂದಲೂ ಡಿ.ಕೆ. ಶಿವಕುಮಾರ್ ಮತ್ತು ಕುಮಾರಸ್ವಾಮಿ ಪರಸ್ಪರ ರಾಜಕೀಯ ಎದುರಾಳಿಗಳಾಗಿಯೇ ಗುರುತಿಸಿಕೊಂಡಿದ್ದಾರೆ. ಹಲವು ಚುನಾವಣೆಗಳು ಮತ್ತು ರಾಜಕೀಯ ಬೆಳವಣಿಗೆಗಳಲ್ಲಿ ಇಬ್ಬರೂ ತೀವ್ರ ಪೈಪೋಟಿ ನಡೆಸಿದ್ದರು.
HDK – ದೊರೆತಿರುವ ಅವಕಾಶವನ್ನು ಕರ್ನಾಟಕದ ಅಭಿವೃದ್ಧಿಗೆ ಬಳಸಿ
ಆದರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಗಮನ ಸೆಳೆದಿದೆ. ಅದರಲ್ಲೂ “ದೊರೆತಿರುವ ಅವಕಾಶವನ್ನು ಕರ್ನಾಟಕದ ಅಭಿವೃದ್ಧಿಗೆ ಬಳಸಿ” ಎಂದು ಅವರು ನೀಡಿರುವ ಕಿವಿಮಾತು ಅತ್ಯಂತ ಆಡಳಿತಾತ್ಮಕ ಮತ್ತು ಪ್ರೌಢ ರಾಜಕಾರಣದ ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನು ನೋಡಿ : 2ನೇ ಬಾರಿ DCM ಆದ PARAMESHWAR – AMBEDKAR ಹೆಸರಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ




