ಬೆಂಬಲಿಗ ಯುವಕರ ಬಂಧನಕ್ಕೆ HDK ಕಿಡಿ – ಸ್ಟಿಂಗ್ ತನಿಖೆ ಆರಂಭ ಶಂಕಿತರಿಬ್ಬರ ವಿಚಾರಣೆ

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ವಿಡಿಯೋ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಬಲಿಗ ಯುವಕರ ಬಂಧನಕ್ಕೆ HDK ಕಿಡಿ
ಇದರಲ್ಲಿ ನನ್ನ ಜೊತೆಗಿರುವ ಹುಡುಗರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದು, ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗಳಿಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.
READ THIS : ಕಬ್ಬು ಬೆಳೆಗಾರರಿಗೆ SAP ಜಾರಿಗೊಳಿಸಿ – CM ಗೆ ಸಚಿವ ಪ್ರಲ್ಹಾದ ಜೋಶಿ ಪತ್ರ!

ಶಂಕಿತರಿಬ್ಬರ ವಿಚಾರಣೆ!
ಹೌದು.. ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹರಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ದೂರು ದಾಖಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡುತ್ತಿರುವ ಖಾತೆಗಳ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಕೆಲವು ಸಾಮಾಜಿಕ ಜಾಲತಾಣ ಖಾತೆಗಳ ಐಪಿ ವಿವರಗಳನ್ನೂ ತನಿಖೆಗೆ ಒದಗಿಸಿದ್ದರು. ಇದೀಗ ವಿಡಿಯೋ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
HDK ಗೆ ಕಾಂಗ್ರೆಸ್ ತಿರುಗೇಟು !
ಇನ್ನು ಎಚ್ಡಿಕೆಗೆ ಕಾಂಗ್ರೆಸ್ ತಿರುಗೇಟು ಕುಟುಕು ಕಾರ್ಯಾ ಚರಣೆಯ ಹಿಂದಿರುವ ವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಡಿಕೆಶಿ ಸಂಪುಟದ ಹಲವು ಸಚಿವರು ಲೇವಡಿ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವುದರಿಂದ ಕೇಂದ್ರ ಸರ್ಕಾರದ ಮೂಲಕವೇ ಸಿಬಿಐ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

MUST WATCH : ನಿಲ್ಲಿಸಿದ್ದ ಜಾಗದಲ್ಲೇ 2 ELECTRIC SCOOTERಗಳು ಸುಟ್ಟು ಭಸ್ಮ




