Accident : ಬೈಕ್ಗಳ ನಡುವೆ ಡಿಕ್ಕಿ – ಮಹಿಳೆ ಸಾವು

ಮಧುಗಿರಿ ತಾಲೂಕಿನ ಐ.ಡಿ. ಹಳ್ಳಿ ವೃತ್ತದ ಯಲ್ಕೂರು ಮಾರ್ಗದಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ Accident ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮತ್ತೋಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಸ್ಥಳದಲ್ಲೇ ಮಹಿಳೆ ಸಾವು
ಹೊಸಕೆರೆ ಗ್ರಾಮದ ಸೋಮಣ್ಣ ಹಾಗೂ ಅವರ ಪತ್ನಿ ಪದ್ಮ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಯಲ್ಕೂರು ಗ್ರಾಮದ ಕಡೆಯಿಂದ ಬಂದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪದ್ಮಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ವಾಹನ ಸವಾರ ಸೋಮಣ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : Chitradurga ದಲ್ಲಿ ರಸ್ತೆ ಅಪಘಾತ – ಮೂವರು ಸ್ಥಳದಲ್ಲೇ ಸಾವು..!!

Accident – ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಾಹಿತಿ ತಿಳಿದ ತಕ್ಷಣ ಮಿಡಿಗೇಶಿ ಠಾಣೆಯ ಪಿಎಸ್ಐ ರವೀಂದ್ರ ಪಿ.ಎಲ್ ಹಾಗೂ ಪೊಲೀಸ್ ಸಿಬ್ಬಂದಿ ನಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಇದನ್ನು ನೋಡಿ : ಹಿರಿಯ ನಾಯಕ, ಮಾಜಿ ಸಚಿವ ಇನ್ನಿಲ್ಲ ವೆಂಕಟರಮಣಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು





