ಅಪ್ಪಾ, ನಾನೇನು ತಪ್ಪು ಮಾಡಿದ್ದೆ? ಆಟವಾಡುತ್ತಿದ್ದ 4 ವರ್ಷದ ಮಗನನ್ನೇ ಕೊಂದು ಜಲಾಶಯಕ್ಕೆ ಎಸೆದ ಪಾಪಿ ತಂದೆ!

4 ವರ್ಷದ ಬಾಲಕನೊಬ್ಬನ ಸಾವಿನ ಪ್ರಕರಣ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಆತಂಕ ಮೂಡಿಸಿದೆ. ತಂದೆಯೇ ತನ್ನ ಮಗುವನ್ನು ಜಲಾಶಯಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಗನೊಂದಿಗೆ ಆಟವಾಡಿ ಕರೆದುಕೊಂಡು ಹೋದ ತಂದೆ
ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಗುಂಡೇಶ್ ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಸೋಮರಾವ್ ಹೂಗಾರ್, ಬಾಲಕನೊಂದಿಗೆ ಕೆಲ ಸಮಯ ಆಟವಾಡಿದ ಬಳಿಕ ಆತನನ್ನು ಕರೆದುಕೊಂಡು ಹೋಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ನಂತರ ಮಗು ಕಾಣೆಯಾಗಿದ್ದರಿಂದ ಕುಟುಂಬಸ್ಥರು ಆತಂಕಗೊಂಡಿದ್ದು, ತಂದೆಯ ನಡೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.
READ THIS : ಹೆಂಡತಿ ಮೇಲಿನ ಕೋಪಕ್ಕೆ ಮಕ್ಕಳನ್ನೇ ಕಾಲುವೆಗೆ ಎಸೆದ ಪಾಪಿ ತಂದೆ.!

ನಾಗರಾಳ ಜಲಾಶಯದಲ್ಲಿ ಶೋಧ
ಬಾಲಕನನ್ನು ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯಕ್ಕೆ ಎಸೆದಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಲಾಶಯದಲ್ಲಿ ಶೋಧ ಕಾರ್ಯ ಆರಂಭಿಸಿದರು. ಶೋಧ ಕಾರ್ಯದ ವೇಳೆ ಜಲಾಶಯದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.
ತಂದೆ ಪೊಲೀಸರ ವಶಕ್ಕೆ
ಬಾಲಕನ ತಾಯಿ ಕಲ್ಪನಾ ಅವರು ಘಟನೆ ಕುರಿತು ಚಿಂಚೋಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸೋಮರಾವ್ ಹೂಗಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕನ ಸಾವಿಗೆ ನಿಖರ ಕಾರಣವೇನು, ಘಟನೆ ಹೇಗೆ ನಡೆದಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
MUST WATCH : ನಾಗೇಂದ್ರ ರಾಜೀನಾಮೆ ನೀಡುವ ಅಗತ್ಯವಿಲ್ಲ – ಹಿಂಗ್ಯಾಕಂದ್ರು ಡಿಸಿಎಂ ಡಾ.ಜಿ.ಪರಮೇಶ್ವರ್




