
Tumakuru|ಬಸವರಾಜ್ ಕನ್ನಾಳೆ ವಿರುದ್ಧ ABVP ಆಕ್ರೋಶ..!
KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಿರುದ್ಧ ABVP ಪ್ರತಿಭಟನೆ ನಡೆಸಿದೆ..ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ,ತುಮಕೂರು ವಿವಿಯ ಕುಲಪತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿ
KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಈಗಾಗಲೇ ಬಂಧನಕ್ಕೊಳಗಾದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ ಎಬಿವಿಪಿ ಕಾರ್ಯಕರ್ತರು, ಅವರನ್ನು ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
READ THIS : ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ABVP ಆಕ್ರೋಶ – ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ..!!

ಕನ್ನಾಳೆ ಭಾವಚಿತ್ರವನ್ನು ಸುಟ್ಟು ಆಕ್ರೋಶ!
ಪ್ರತಿಭಟನೆಯ ವೇಳೆ ಬಸವರಾಜ್ ಕನ್ನಾಳೆ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಕನ್ನಾಳೆ ಅವರ ಅವಧಿಯಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದಿರಬಹುದಾದ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಕೂಡಲೇ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಕರೆದು ಬಸವರಾಜ್ ಕನ್ನಾಳೆ ಅವರನ್ನು ಸದಸ್ಯತ್ವದಿಂದ ವಜಾಗೊಳಿಸುವ ಕುರಿತು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು ಎಂಬ ಬೇಡಿಕೆಯನ್ನು ಎಬಿವಿಪಿ ಮುಂದಿಟ್ಟಿದೆ.

ತುಮಕೂರಿಗೂ ತಟ್ಟಿದ KPSC ಹಗರಣದ ಕಾವು
ಒಟ್ಟಾರೆ KPSC ನೇಮಕಾತಿ ಹಗರಣದ ಕಾವು ಈಗ ತುಮಕೂರು ವಿಶ್ವವಿದ್ಯಾಲಯಕ್ಕೂ ತಟ್ಟಿದ್ದು, ಬಸವರಾಜ್ ಕನ್ನಾಳೆ ವಿರುದ್ಧ ಎಬಿವಿಪಿ ನಡೆಸಿರುವ ಪ್ರತಿಭಟನೆ ಹೊಸ ಚರ್ಚೆಗೆ ಕಾರಣವಾಗಿದೆ. ಸಿಂಡಿಕೇಟ್ ಸದಸ್ಯತ್ವದ ಕುರಿತು ವಿಶ್ವವಿದ್ಯಾಲಯ ಯಾವ ನಿರ್ಧಾರ ಕೈಗೊಳ್ಳುತ್ತೆ ಅನ್ನೋದು ಕಾದುನೋಡ್ಬೇಕಿದೆ..
MUST WATCH : ನನ್ನೇ ಪತನ ಮಾಡ್ತೀವಿ ಅಂತಾರೆ – ಆಯ್ತಪ್ಪ ಸಕ್ಸಸ್ ಆಗಿ ತಪ್ಪೇನಿಲ್ಲಾ





