
RAIN ALERT : ಮುಂದಿನ 3 ಗಂಟೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ! 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಅಬ್ಬರ
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಜನರಿಗೆ ಇದೀಗ ಮಳೆಯ ನಿರೀಕ್ಷೆ ಮೂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವೂ ಹೆಚ್ಚಾಗಬಹುದು ಎಂದು ಎಚ್ಚರಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
READ THIS : ರಾಜ್ಯದಲ್ಲಿ ಮತ್ತೆ ಮುಂಗಾರು ಆರ್ಭಟ – ಈ 6 ಜಿಲ್ಲೆಗಳಿಗೆ ಭಾರಿ ಮಳೆ!

RAIN ALERT – ಮರಗಳ ಕೆಳಗೆ ನಿಲ್ಲದಂತೆ ಸಲಹೆ
ಇನ್ನು ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಗುಡುಗು–ಮಿಂಚು ಕಾಣಿಸಿಕೊಂಡಾಗ ಮರಗಳ ಕೆಳಗೆ ನಿಲ್ಲದಂತೆ ಸಲಹೆ ನೀಡಲಾಗಿದೆ. ಇನ್ನು ಮುಂಗಾರು ಅವಧಿಯಲ್ಲಿ ಮಳೆ ಕೊರತೆಯಿಂದ ಹಲವು ಭಾಗಗಳಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದು, .ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಸಮಸ್ಯೆಯೂ ಎದುರಾಗಿದೆ.
ಒಟ್ಟಿನಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.

MUST WATCH : ಬರದ ನಾಡಲ್ಲಿ ಬಂಗಾರದ ಬೆಳೆ – ರೈತನ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ




