Karnataka Weather : ಮುಂದಿನ 7 ದಿನ ವರುಣನ ಅಬ್ಬರ – ಗುಡುಗು, ಬಿರುಗಾಳಿ ಸಹಿತ ಮಳೆ ಮುನ್ಸೂಚನೆ.!

Karnataka Weather : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕೆಎಸ್ಎನ್ಡಿಎಂಸಿ ಮುನ್ಸೂಚನೆ ನೀಡಿವೆ.

ರಾಜ್ಯದಲ್ಲಿ ವರುಣನ ಆರ್ಭಟ ಶುರು
ನೈರುತ್ಯ ಬಂಗಾಳ ಕೊಲ್ಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ. ಇದರ ಪರಿಣಾಮವಾಗಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
READ THIS : ಕ್ಷುಲಕ ವಿಚಾರಕ್ಕೆ ಆಟೋ ಚಾಲಕನ ಬರ್ಬರ Murder!

ಗುಡುಗು ಸಹಿತ ಸಾಧಾರಣ ಮಳೆ
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Weather – ಭಾರೀ ಮಳೆಯಾಗುವ ಜಿಲ್ಲೆಗಳು
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ.

MUST WATCH : PETROL , DIESEL ದರ ಮತ್ತೆ ಏರಿಕೆ ಇಂದಿನ ರೇಟ್ ಕೇಳಿದ್ರೆ ಶಾಕ್ ಆಗ್ತೀರಾ




