Karnataka ದಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ…ಹಲವು ಜಿಲ್ಲೆಗಳಿಗೆ ಬಿರುಗಾಳಿ, ಮಳೆ ಎಚ್ಚರಿಕೆ

Karnataka ದಲ್ಲಿ ಮುಂದಿನ ಮೂರು ದಿನಗಳ ಕಾಲ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಧಾರಣ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಮುಂಗಾರು ಮಳೆ ಮುಂದುವರಿಯಲಿದ್ದು, ಕರಾವಳಿ ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

30-40 ಕಿ.ಮೀ ವೇಗದಲ್ಲಿ Karnataka ದ ಹಲವೆಡೆ ಬಿರುಗಾಳಿ ಸಾಧ್ಯತೆ
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಾಳಿ ಜೋರು – ಎಲ್ಲೆಲ್ಲಿ ಮಳೆ ?

ಮುಂದಿನ ಮೂರುರಿಂದ ಐದು ದಿನಗಳ ಕಾಲ ಬಿರುಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ವಿಶೇಷವಾಗಿ ಬಾಳೆ, ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳನ್ನು ಬೆಳೆದಿರುವ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ತೇವಾಂಶದ ಪ್ರಮಾಣವೂ ಹೆಚ್ಚಾಗಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗುವ ಸಾಧ್ಯತೆ ಇದೆ.
MUST WATCH: ಯುವತಿಯರ ಜೊತೆ ಪೊಲೀಸಪ್ಪನ ಪೋಲಿ ಆಟಹೆಂಡ್ತಿ, ಮಾವನ ಮೇಲೆ ಮಚ್ಚು ಬೀಸಲು ಮುಂದಾದ




