Rain Alert : ರಾಜ್ಯದಲ್ಲಿ ಮತ್ತೆ 2 ದಿನಗಳ ಕಾಲ ಮಳೆ – ಪೂರ್ವ ಮುಂಗಾರಿಗೆ ಜನರು ತತ್ತರ

Rain Alert : ಮುಂದಿನ ವಾರದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದೆ.
ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಆಗ್ತಾ ಇದ್ದು, ನಾನಾ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.
ಹಲವು ದಿನಗಳಿಂದ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಇದೀಗ ಸಮೃದ್ಧಿ ಮಳೆ ಆಗ್ತಾ ಇದ್ದು, ಮಳೆಯಿಂದ ಭೂಮಿ ತಂಪರೆದಿದ್ರೆ, ಹಲವೆಡೆ ಅವಾಂತರಗಳು ಆಗ್ತಾ ಇವೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ
ಮುಂದಿನ 2-3 ದಿನಗಳಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಕರಾವಳಿ ಭಾಗಗಳಲ್ಲಿ ಮುಂಗಾರು ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ ಆಗುತ್ತೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರ ನಡುವೆಯೂ ಪೂರ್ವ ಮುಂಗಾರು ಉತ್ತಮವಾಗಿ ಆಗ್ತಾ ಇದ್ದು, ಬರಿದಾಗಿದ್ದ ಕೆರೆ ಕಟ್ಟೆಗಳು ಭರ್ತಿಯಾಗುತ್ತಿವೆ. ಅಲ್ದೇ ರೈತರು ಜಮೀನು ಉಳುಮೆ ಕೆಲಸ ಮಾಡಲು ಶುರು ಮಾಡಿಕೊಳ್ಳುತ್ತಿದ್ದಾರೆ.

ನಿನ್ನೆ ತುಮಕೂರು ಜಿಲ್ಲೆಯಾದ್ಯಂತ ಅಬ್ಬರಿಸಿದ ಮಳೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲು ಇದ್ದು, ಸಂಜೆ ಆಗ್ತಾ ಇದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಅಬ್ಬರದ ಮಳೆ ಆಗ್ತಾ ಇದೆ.
ನಿನ್ನೆ ಕೂಡ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ, ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಿದೆ.
ಇತ್ತ ರಾಜ್ಯದ ಹಲವೆಡೆ ಮಳೆ ಆಗ್ತಾ ಇದ್ರು ಕೂಡ ತುಮಕೂರು ಜಿಲ್ಲೆಯಲ್ಲಿ ಸ್ವಲ್ಪ ಮಳೆ ಪ್ರಮಾಣ ಕಡಿಮೆ ಇತ್ತು. ಆದ್ರೆ ನಿನ್ನೆ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿ ಬೊಬ್ಬಿರಿದಿದ್ದು ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದೆ.
ಇದನ್ನು ಓದಿ : ಇನ್ನೆರಡು ದಿನ 19 ರಾಜ್ಯಗಳಲ್ಲಿ ಭಾರೀ ಮಳೆ ಅಲರ್ಟ್….!!

ಮನೆಗಳಿಗೆ ಮಳೆ ನೀರು ನುಗ್ಗಿ ಭಾರೀ ಅವಾಂತರ
ತುಮಕೂರಿನಲ್ಲಿ ನಿನ್ನೆ ಸಂಜೆ 5 ಗಂಟೆಗೆ ಶುರುವಾದ ಮಳೆ ಬಿಟ್ಟು ಬಿಡದೇ ಸುರಿದಿದೆ. ಗುಡುಗು ಸಹಿತ ಭಾರೀ ಮಳೆ ಆಗಿದ್ದು, ಹಲವು ಕಡೆ ಮರಗಳು ಬಿದ್ದಿದ್ರೆ, ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದೆ.
ಮುಂದಿನ ಎರಡು ದಿನಗಳ ಕಾಲ ಹಲವೆಡೆ ಮಳೆ ಆಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನು ನೋಡಿ : ಮಾಜಿ ಸಚಿವ VENKATARAMANAPPA ಇನ್ನು ನೆನಪು ಮಾತ್ರ – ಅಂತ್ಯಕ್ರಿಯೆಗೆ ಯಾರೆಲ್ಲಾ ಬಂದಿದ್ರು ಗೊತ್ತಾ?




