
RAIN ALERT : ಹವಾಮಾನ ಇಲಾಖೆ ಎಚ್ಚರಿಕೆ: ಮುಂದಿನ 5 ದಿನಗಳ ಕಾಲ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ
ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಸಾಧ್ಯತೆಯಿದ್ದು, ಬೆಂಗಳೂರು, ತುಮಕೂರು, ಹಾಸನ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಹೌದು.. ಕರಾವಳಿ ಕರ್ನಾಟಕದಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 16ರಿಂದ 20ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಅಕ್ಟೋಬರ್ 16ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 15ರಿಂದ 20ರವರೆಗೆ ಚದುರಿದಂತೆ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
READ THIS : ಮುಂದಿನ 3 ಗಂಟೆ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಈ ಭಾಗಗಳಲ್ಲಿ ಅಕ್ಟೋಬರ್ 20 ರವರೆಗೆ ಮಳೆ
ಮತ್ತೊಂದೆಡೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಕ್ಟೋಬರ್ 16ರಿಂದ 20ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
RAIN ALERT – ಇಂದು ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ
ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಯಚೂರು, ಗದಗ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಇನ್ನು ನಾಳೆ, ಅಕ್ಟೋಬರ್ 16ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ
ಧಾರವಾಡ, ವಿಜಯಪುರ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
MUST WATCH : ರಾಜಭವನಕ್ಕೆ ಹೊಸ ಸಾರಥಿ… ಪ್ರಮಾಣವಚನಕ್ಕೆ ಸಕಲ ಸಿದ್ಧತೆ




