RAIN ALERT : ಇಂದು ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ.

ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಹಲವು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಬಿರುಗಾಳಿಯ ವಾತಾವರಣ ನಿರ್ಮಾಣವಾಗಬಹುದು.

ಉತ್ತರ ಒಳನಾಡಿಗೂ ಮಳೆ ಎಚ್ಚರಿಕೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆ, ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
RAED THIS : ರಾಜ್ಯದಲ್ಲಿ ಐದು ದಿನಗಳ ಕಾಲ ಭಾರೀ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ಸಾಧಾರಣದಿಂದ ಉತ್ತಮ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಆಗಾಗ್ಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲೂ ಮಳೆ ಸಾಧ್ಯತೆ
ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.
ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

MUST WATCH : ಜೈಲಲ್ಲಿರುವ ಕನ್ನಾಳೆಗೆ ಮತ್ತೊಂದು ಕಂಟಕ ತುಮಕೂರು ವಿವಿಯಿಂದ ರಾಜ್ಯಪಾಲರಿಗೆ ವರದಿ




