
RAIN ALERT : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ! ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಹಿಂಗಾರು ಚುರುಕು!
ಕಳೆದ ಕೆಲವು ದಿನಗಳಿಂದ ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ನಡುವೆ ಇದೀಗ ವರುಣನ ಆಗಮನದ ನಿರೀಕ್ಷೆ ಹೆಚ್ಚಾಗಿದೆ.
ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ!
ನವೆಂಬರ್ ಆರಂಭದಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಕರಾವಳಿ ಭಾಗದಲ್ಲಿ ಮಳೆಯ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
READ THIS : ಕರ್ನಾಟಕದಲ್ಲಿ ಇನ್ನು ಮೂರು ದಿನ ಮಳೆ ಅಬ್ಬರ

RAIN ALERT – ಹಿಂಗಾರು ಮಳೆ ಚುರುಕಾಗುವ ಸಾಧ್ಯತೆ
ಇನ್ನು ಮಲೆನಾಡಿನ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಧ್ಯಾಹ್ನದ ನಂತರ ಮತ್ತು ಸಂಜೆ ವೇಳೆಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 2ರಂದು ಆಂಧ್ರಪ್ರದೇಶದ ನೆಲ್ಲೂರು ಕರಾವಳಿ ಮೂಲಕ ಭೂಪ್ರವೇಶಿಸುವ ಸಾಧ್ಯತೆಯಿದ್ದು, ಬಳಿಕ ಪಶ್ಚಿಮದತ್ತ ಸಾಗಿ ಕ್ರಮೇಣ ದುರ್ಬಲಗೊಳ್ಳಲಿದ್ದು, ಹಿಂಗಾರು ಮಳೆ ಚುರುಕಾಗುವ ಸಾಧ್ಯತೆ ಇದೆ.

ಒಟ್ಟಿನಲ್ಲಿ, ನವೆಂಬರ್ ಆರಂಭದಲ್ಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ನಿರೀಕ್ಷೆ ಮೂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೇಗೆ ಇರಲಿದೆ ಎಂಬುದನ್ನು ನೋಡಬೇಕಿದೆ.
MUST WATCH : ಸಕ್ಕರೆ ಕಾರ್ಖಾನೆ ವಿರುದ್ಧ ಸಮರ – ಸಚಿವರ ಮನೆ ಮುಂದೆ ಅನ್ನದಾತರ ಪಟ್ಟು..!





