
YADGIRI : ರಾಜ್ಯದಲ್ಲಿ ಹೀನ ಕೃತ್ಯ – ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರಕ್ಕೆ ಯತ್ನ : ವೃದ್ಧ ಅರೆಸ್ಟ್!
ಮೊಮ್ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ 75 ವರ್ಷದ ವ್ಯಕ್ತಿಯೊಬ್ಬರನ್ನು ಕೆಂಭಾವಿ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರಕ್ಕೆ ಯತ್ನ
ಆರೋಪಿ ಶರಣಪ್ಪ ಟಣಕೇದಾರ ಎಂಬಾತ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಇನ್ನು ಈ ದುಷ್ಕೃತ್ಯ ಕಂಡ ವ್ಯಕ್ತಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
READ THIS : ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರಕ್ಕೆ ಯತ್ನ
ಬಾಲಕಿಯ ತಾಯಿ, ಅಜ್ಜ-ಅಜ್ಜಿಯ ಮನೆಯಲ್ಲಿ ಮಗಳನ್ನು ಬಿಟ್ಟು ಬೆಂಗಳೂರಿಗೆ ತೆರಳಿದ್ದಾಳೆ. ಬಾಲಕಿ ಮನೆಯಲ್ಲಿದ್ದ ವೇಳೆ ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರ ಯತ್ನ ಆರೋಪ ಕೇಳಿ ಬಂದಿದೆ.
ಇನ್ನು ಘಟನೆಯ ಬಳಿಕ ಬಾಲಕಿಯನ್ನು ರಕ್ಷಿಸಿ, ಚಿಕಿತ್ಸೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಬಾಲ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ.
YADGIRI – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಕೆಂಭಾವಿ ಪೊಲೀಸರು ಆರೋಪಿ ಶರಣಪ್ಪ ಟಣಕೇದಾರನನ್ನು ಬಂಧಿಸಿದ್ದು, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 115(2), 109(1) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

MUST WATCH : CYCLE ಜೊತೆ ಏಕಶಿಲಾ ಬೆಟ್ಟ ಏರಿದ ಸಾಹಸಿ – ENGINEER ಸಾಹಸಕ್ಕೆ ಎಲ್ರೂ ಫಿದಾ.!




