ಇಲ್ಲಿದೆ ನೂತನ ಸಚಿವರ ಪಟ್ಟಿ – ಇಂದು ಸಂಜೆಯೇ ಪ್ರಮಾಣವಚನ ಸ್ವೀಕಾರ

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ರಾಜ್ಯ ಸರ್ಕಾರದಲ್ಲಿ ಖಾಲಿ ಇದ್ದ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ನೀಡಿದ್ದು, ಇಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಮುದ್ರೆ
ಸಚಿವ ಸ್ಥಾನದ ಆಕಾಂಕ್ಷಿಗಳ ನಡುವೆ ಹಲವು ದಿನಗಳಿಂದ ನಡೆದಿದ್ದ ತೀವ್ರ ಪೈಪೋಟಿ, ರಾಜಕೀಯ ಲೆಕ್ಕಾಚಾರ ಮತ್ತು ದೆಹಲಿಯಲ್ಲಿ ನಡೆದ ಸಮಾಲೋಚನೆಗಳ ಬಳಿಕ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಮುದ್ರೆ ಒತ್ತಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಇದನ್ನು ಓದಿ : ಸಿಎಂ ಡಿಕೆ ಶಿವಕುಮಾರ್ ಕೈ ಸೇರಿತು ನೂತನ ಸಚಿವರ ಫೈನಲ್ ಲಿಸ್ಟ್!

ಇಂದು ಪ್ರಮಾಣವಚನ ಸ್ವೀಕರಿಸಲಿರುವ ಸಂಭಾವ್ಯ ಸಚಿವರ ಪಟ್ಟಿ
- ಪಿ.ಎಂ. ನರೇಂದ್ರಸ್ವಾಮಿ
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ.ಎಸ್. ಬಸವಂತಪ್ಪ
- ಬಿ. ನಾಗೇಂದ್ರ
- ಟಿ. ರಘುಮೂರ್ತಿ
- ಬಿ. ಜಮೀರ್ ಅಹ್ಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಸಿ.ಎಸ್. ಪುಟ್ಟರಂಗಶೆಟ್ಟಿ
- ಮಂಕಾಳ್ ವೈದ್ಯ
- ಅಜಯ್ ಸಿಂಗ್
- ಎನ್. ಚೆಲುವರಾಯಸ್ವಾಮಿ
- ಕೆ.ಎಂ. ಶಿವಲಿಂಗೇಗೌಡ
- ಹೆಚ್.ಸಿ. ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ್ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ್
- ಲಕ್ಷ್ಮಣ್ ಸವದಿ
ರಾಜಭವನದಲ್ಲಿ ಇಂದು ನಡೆಯಲಿರುವ ಪ್ರಮಾಣವಚನ ಸಮಾರಂಭದ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಇದನ್ನು ನೋಡಿ : ಆ. 9 ರಿಂದ 11ರವರೆಗೆ ಜೆಡಿಎಸ್ ಪಾದಯಾತ್ರೆ – ಪಾದಯಾತ್ರೆ ಬಗ್ಗೆ ನಿಖಿಲ್ ಹೇಳಿದ್ದೇನು.?




