ರಾಜ್ಯದಲ್ಲಿ SC, ST ಮೀಸಲಾತಿ ಪ್ರಮಾಣ ಹೆಚ್ಚಳ ರದ್ದು, ಹೈಕೋರ್ಟ್ ಮಹತ್ವದ ಆದೇಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್ ಮಹತ್ವದ ಆದೇಶ
ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ ಈ ಆದೇಶ ನೀಡಿದೆ.
READ THIS : ಮಾಜಿ CM ಯಡಿಯೂರಪ್ಪಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್!

ಮೀಸಲಾತಿ ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್!
2023ರ ಜನವರಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ. 15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು. ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಅಧೀನದ ಹುದ್ದೆಗಳಲ್ಲಿ ಈ ಹೆಚ್ಚಳ ಅನ್ವಯವಾಗುವಂತೆ ಕಾಯ್ದೆ ರೂಪಿಸಲಾಗಿತ್ತು.
ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ, ಸಂವಿಧಾನದಲ್ಲಿ ಗುರುತಿಸಲಾಗಿರುವ ಶೇ.50ರ ಮೀಸಲಾತಿ ಮಿತಿಯನ್ನು ಮೀರುವುದಕ್ಕೆ ಅಗತ್ಯವಾದ ಬಲವಾದ ಸಾಂವಿಧಾನಿಕ ಸಮರ್ಥನೆ ಇಲ್ಲ ಎಂಬ ಅಭಿಪ್ರಾಯವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ
ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಿಸಿದ್ದ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ತೀರ್ಪಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ.
MUST WATCH : ಪ್ರಜ್ವಲ್ ಶಿಫ್ಟಿಂಗ್ಗೆ ಭದ್ರತೆ ಅಡ್ಡಿ, ಭದ್ರತೆ ನೀಡಲು ತೊಂದರೆ ಎಂದ ಹಿಂಡಲಗಾ ಜೈಲು




