ಬೆಂಗಳೂರು ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದ Hit and Run ಪ್ರಕರಣದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು Hit and Run Case ಪ್ರಕರಣ ಬೆಳಕಿಗೆ ಬಂದಿದೆ. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಅನಿಲ್ ಕುಂಬ್ಳೆ ಸರ್ಕಲ್ ಬಳಿ ದುರ್ಘಟನೆ
ಈ ಘಟನೆ ಇಂದು ಮುಂಜಾನೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶ್ರೀನಿವಾಸ್ ಎಂಬುವರಿಗೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಶ್ರೀನಿವಾಸ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
MUST READ : Madikeri : ಚಲಿಸುತ್ತಿದ್ದ ಬಸ್ ಚಾಲಕನಿಗೆ Heart Attack – ತಪ್ಪಿದ ಭಾರೀ ಅನಾಹುತ..!!

ಪೊಲೀಸರ ತನಿಖೆ ಆರಂಭ
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಸಂಬಂಧ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್ಎಸ್ 106 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
MUST WATCH : ಕೆಟ್ಟು ನಿಂತಿದೆ ಕುಡಿಯುವ ನೀರಿನ ಘಟಕ – ವರ್ಷದಿಂದ ನೀರಿಲ್ಲದೇ ಗ್ರಾಮಸ್ಥರ ಪರದಾಟ..! | SIRA NEWS |




