ACCIDENT : ಸ್ವಿಫ್ಟ್ ಕಾರು, ಕ್ಯಾಂಟರ್ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ
ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ವಿಫ್ಟ್ ಕಾರು ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಪ್ರಾಣ ಬಿಟ್ಟಿದ್ದಾರೆ.
ನಾಲ್ವರು ಸ್ಥಳದಲ್ಲೇ ದುರ್ಮರಣ
ಇನ್ನು ಅಪಘಾತದಲ್ಲಿ ಮೃತಪಟ್ಟವರನ್ನು ಅಜೀತ್, ರಾಕೇಶ್, ಸಂದೀಪ್ ಹಾಗೂ ಶೃತಿ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆಯವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ವಿಜಯಪುರದ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ವಾಹನಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
READ THIS : ಭೀಕರ ಅಪಘಾತ – ಲಾರಿ ಡಿಕ್ಕಿಯಾಗಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು!

ಸ್ವಿಫ್ಟ್ ಕಾರು, ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ
ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ನಾಲ್ವರು, ಗಮ್ಯಸ್ಥಾನ ತಲುಪುವ ಮುನ್ನವೇ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಹಾಗೂ ಕ್ಯಾಂಟರ್ ನಡುವಿನ ಮುಖಾಮುಖಿ ಡಿಕ್ಕಿಗೆ ನಿಖರ ಕಾರಣವೇನು ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ.
ACCIDENT – ಪೊಲೀಸರು ಭೇಟಿ, ಪರಿಶೀಲನೆ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
MUST WATCH : ತಾಲೂಕು ಕಚೇರಿಗೆ DCM ದಿಢೀರ್ ವಿಸಿಟ್ – ಓಡೋಡಿ ಬಂದ DC, ತಹಶೀಲ್ದಾರ್.!





