
ಚಿಂತಾಮಣಿ–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ACCIDENT
ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗ್ತಿದ್ದು, ಕೆಂಪೇಗೌಡ ಏರ್ ಪೋರ್ಟ್ಗೆ ವ್ಯಕ್ತಿಯೊಬ್ಬರನ್ನು ಬಿಟ್ಟು ವಾಪಸ್ ಬರುತ್ತಿದ್ದ ಕಾರೊಂದು ಭೀಕರ ಅಪಘಾತಕ್ಕೀಡಾಗಿದೆ.
ಕಾರು ಚಾಲಕ ಸ್ಥಳದಲ್ಲೇ ಸಾವು!
ಹೌದು.. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ರೆ ಮೂರು ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡಿದ್ದಾರೆ.
READ THIS : ಮಲಗಿದ್ದ ಮಗು ಏಳಲೇ ಇಲ್ಲ! 3 ವರ್ಷದ ಕಂದ ಅನುಮಾನಾಸ್ಪದ ಸಾವು
ಚಿಂತಾಮಣಿ–ಬೆಂಗಳೂರು ಹೆದ್ದಾರಿಯ ಚಿನ್ನಸಂದ್ರ ಗೇಟ್ ಸಮೀಪ ಈ ACCIDENT ಸಂಭವಿಸಿದ್ದು, ಮೃತ ಚಾಲಕನನ್ನು ಆಂಧ್ರಪ್ರದೇಶದ 23 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ACCIDENT – ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಹರಸಾಹಸ
ಗಾಯಾಳುಗಳನ್ನ ತಕ್ಷಣವೇ ಎಚ್. ಕ್ರಾಸ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕೈವಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : ಪೂಜೆ ವಿಚಾರವಾಗಿ ಭುಗಿಲೆದ್ದ ವಿವಾದ – ಸಮಸ್ಯೆ ಬಗೆಹರಿಸಲು ಶಾಸಕರಿಗೆ ಮೊರೆ

