Chikkaballapur ತಾಲೂಕಿನ ನಂದಿ ಕಣಿವೆ ಬಳಿ ಥಾರ್ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣ ಮೃತಪಟ್ಟಿದ್ದು, ತಂಗಿಗೆ ಗಂಭೀರ ಗಾಯಗಳಾಗಿವೆ.

Chikkaballapur : ಜಿಲ್ಲೆಯ ನಂದಿ ಕಣಿವೆ ಬಸವಣ್ಣ ದೇವಸ್ಥಾನದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಥಾರ್ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ ಮೃತಪಟ್ಟಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಾಹಿತಿಯ ಪ್ರಕಾರ, ಅಪಘಾತದಲ್ಲಿ ಶಶಿಕುಮಾರ್ (32) ಮೃತಪಟ್ಟಿದ್ದಾರೆ. ಅವರ ತಂಗಿ ಚಂದನಾ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕುಮಾರ್ ತಮ್ಮ ತಂಗಿ ಚಂದನಾಳನ್ನು ಕಾಲೇಜಿನಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಚಂದನಾ ಬೆಸ್ಟ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಬ್ಬರೂ ದೊಡ್ಡಬಳ್ಳಾಪುರ ತಾಲೂಕಿನ ಸೊನ್ನಮಾರನಹಳ್ಳಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಥಾರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಶಶಿಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಂದನಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಅಪಘಾತದ ಬಳಿಕ ಥಾರ್ ಕಾರಿನ ಚಾಲಕ ವಾಹನವನ್ನು ಪೊಲೀಸ್ ಠಾಣೆ ಸಮೀಪ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
MUST WATCH : ದೇವರ ತಾಳಿಯನ್ನೇ ಟಾರ್ಗೆಟ್ ಮಾಡ್ತಿದ್ದ ಅಂತರ್ ರಾಜ್ಯ ಕಳ್ಳರನ್ನ ಬೇಟೆಯಾಡಿದ ಖಾಕಿ | TURUVEKERE NEWS |




