Tumakuru : ಭೀಕರ ಅಪಘಾತ – ಹಿಟ್ & ರನ್ಗೆ ನವದಂಪತಿ ದುರ್ಮರಣ!

ಮದುವೆಯಾಗಿ ಕೇವಲ ಒಂದೂವರೆ ತಿಂಗಳಿಗೆ ನವ ದಂಪತಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹೌದು.. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಹಿಟ್ ಆಂಡ್ ರನ್ ಅಪಘಾತದಲ್ಲಿ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವದಂಪತಿ ಮೃತಪಟ್ಟಿರುವ ದಾರುಣ ಘಟನೆ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ನಡೆದಿದೆ.
ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ದಂಪತಿ
ಮೃತರನ್ನು ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ನಿವಾಸಿಗಳಾದ ದರ್ಶನ್ (25) ಮತ್ತು ಉಷಾರಾಣಿ (21) ಎಂದು ಗುರುತಿಸಲಾಗಿದೆ. ಇಬ್ಬರ ವಿವಾಹ ನಡೆದು ಕೇವಲ ಒಂದೂವರೆ ತಿಂಗಳಷ್ಟೇ ಕಳೆದಿತ್ತು.
READ THIS : ಹಿಟ್ ಅಂಡ್ ರನ್ಗೆ ಇಬ್ಬರು ಬೈಕ್ ಸವಾರರು ಬಲಿ!

Tumakuru – ಹಿಟ್ & ರನ್ ಗೆ ನವದಂಪತಿ ದುರ್ಮರಣ!
ಮಂಗಳವಾರ ದರ್ಶನ್ ಹಾಗೂ ಉಷಾರಾಣಿ ಬೈಕ್ನಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 48ರ ದ್ವಾರಾಳು ಸೇತುವೆ ಮೇಲೆ ಅಪರಿಚಿತ ವಾಹನವೊಂದು ಇವರ ಬೈಕ್ಗೆ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಅಪಘಾತದ ಬಳಿಕ ವಾಹನ ಚಾಲಕ ನಿಲ್ಲಿಸದೆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಇನ್ನು ಡಿಕ್ಕಿಯ ರಭಸಕ್ಕೆ ದರ್ಶನ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಉಷಾರಾಣಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರಕರಣ ದಾಖಲು
ಘಟನೆಗೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

MUST WATCH : ಆಹ್ವಾನ ಪತ್ರಿಕೆಯಲ್ಲಿ ಹೆಸರು ಮಿಸ್ ಬ್ಯಾಂಕ್ ವಿರುದ್ಧ ಕಾಂಗ್ರೆಸ್ ಆಕ್ರೋಶ




