Kalaburagi ಜಿಲ್ಲೆಯ ಚಿತ್ತಾಪುರ ಸಮೀಪ ಕೆಕೆಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ.

Kalaburagi ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಚಿತ್ತಾಪುರದಿಂದ ಸನ್ನತಿಗೆ ತೆರಳುತ್ತಿದ್ದ ಕೆಕೆಆರ್ಟಿಸಿ ಬಸ್ಗೆ ಬೊಮ್ಮನಳ್ಳಿ ಕಡೆಯಿಂದ ಚಿತ್ತಾಪುರದತ್ತ ಸಾಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪೊಲೀಸರು ಕಲೆಹಾಕಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈಕ್ ರಭಸವಾಗಿ ಬಸ್ನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ನಲ್ಲಿದ್ದ ಮೂವರು ಯುವಕರು ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಬಸ್ನ ಚಕ್ರಗಳು ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
MUST READ : ಜನಸಾಮಾನ್ಯರಿಗೆ ಶಾಕ್ – ಬೆಂಗಳೂರಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

ಅಪಘಾತದಲ್ಲಿ ಮೃತಪಟ್ಟವರನ್ನು ಬೊಮ್ಮನಹಳ್ಳಿ ಗ್ರಾಮದ ದೇವರಾಜ ತಂ. ಅಯ್ಯಪ್ಪ (19), ಮುಡಬೂಳ ಗ್ರಾಮದ ಲಕ್ಷ್ಮಿಕಾಂತ (20) ಹಾಗೂ ಸೇಡಂ ತಾಲ್ಲೂಕಿನ ಬಿಜನಳ್ಳಿ ಗ್ರಾಮದ ಪ್ರಕಾಶ ತಂ. ಬಸಪ್ಪ (23) ಎಂದು ಗುರುತಿಸಲಾಗಿದೆ. ಯುವಕರ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಚಿತ್ತಾಪುರ ಸಿಪಿಐ ಎಸ್.ಬಿ. ಪಾಟೀಲ್ ಹಾಗೂ ಪಿಎಸ್ಐ ಮಂಜುನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿತ್ತಾಪುರ ತಾಲ್ಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
MUST WATCH : ಜೂ 28ರಿಂದ ಪಲ್ಸ್ ಪೋಲಿಯೋ ಅಭಿಯಾನ ತುಮಕೂರಿನಲ್ಲಿ ಕ್ಯಾಂಪೇನ್ಗೆ ಫುಲ್ ಪ್ರಿಪರೇಷನ್




