ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ; ಮಗುವನ್ನು ಪೋಷಕರ ವಶಕ್ಕೆ ನೀಡುವಂತೆ ಡೆತ್ನೋಟ್ನಲ್ಲಿ ಉಲ್ಲೇಖ

ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದು 26 ವರ್ಷದ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.
4 ವರ್ಷದ ಮಗು ಅನಾಥ
ಮೃತರನ್ನು ಮಮತಾಶ್ರೀ ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಮೋಹನ್ ರೆಡ್ಡಿ ಎಂಬುವವರೊಂದಿಗೆ ವಿವಾಹವಾಗಿದ್ದ ಮಮತಾಶ್ರೀ ಅವರಿಗೆ ನಾಲ್ಕು ವರ್ಷದ ಗಂಡು ಮಗುವಿದೆ.
ಇದನ್ನು ಓದಿ : ವರದಕ್ಷಿಣೆ ಕಿರುಕುಳಕ್ಕೆ ಎರಡು ಮಕ್ಕಳ ತಾಯಿ ಬಲಿ!

ಡೆತ್ನೋಟ್ನಲ್ಲಿ ಏನಿದೆ?
ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಮಮತಾಶ್ರೀ Suicide ಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾರೆ. ತಮ್ಮ ಮಗುವನ್ನು ಪೋಷಕರ ವಶಕ್ಕೆ ನೀಡಬೇಕು ಮತ್ತು ತಮ್ಮ ಅಂತ್ಯಸಂಸ್ಕಾರದಲ್ಲಿ ಪತಿ ಪಾಲ್ಗೊಳ್ಳಬಾರದು ಎಂದು ಡೆತ್ನೋಟ್ನಲ್ಲಿ ಬರೆದಿಟ್ಟಿರುವುದಾಗಿ ತಿಳಿದುಬಂದಿದೆ.
Suicide – ಪ್ರಕರಣ ದಾಖಲು
ಮೃತ ಮಮತಾಶ್ರೀ ತಂದೆ ನೀಡಿದ ದೂರಿನ ಆಧಾರದ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : 42 ವರ್ಷ ಹೋರಾಟ ಮಾಡಿದ್ದಕ್ಕೆ ಈಗ ನನಗೆ ಫಲ ಸಿಕ್ಕಿದೆ ಎಂದ ಡಿಕೆಶಿ !




