Hubballi ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Hubballi : ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಶಾಂತಿನಗರ ಪ್ಲಾಟ್ನಲ್ಲಿ ನಡೆದಿದೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅನೈತಿಕ ಸಂಬಂಧದ ಶಂಕೆ
ಕೊಲೆಯಾದ ವ್ಯಕ್ತಿಯನ್ನು ಫಕ್ಕೀರಪ್ಪ ಅಲಿಯಾಸ್ ಬಸು ಅಕ್ಕಿವಳ್ಳಿ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಕಾಶ್ ಕರಶೆಟ್ಟಿ ಎಂಬಾತನ ಮೇಲೆ ಹತ್ಯೆ ಆರೋಪ ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆಯೇ ನಡೆದಿತ್ತು ರಾಜೀ ಪಂಚಾಯಿತಿ
ಮಾಹಿತಿಯ ಪ್ರಕಾರ, ಪ್ರಕಾಶ್ ಕರಶೆಟ್ಟಿ ಅವರ ಪತ್ನಿಯೊಂದಿಗೆ ಬಸು ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಇತ್ತು. ಇದೇ ವಿಚಾರವಾಗಿ ಈ ಹಿಂದೆ ಗ್ರಾಮದಲ್ಲಿ ರಾಜೀ ಪಂಚಾಯಿತಿಯೂ ನಡೆದಿತ್ತು. ಆದರೂ ಸಂಬಂಧ ಮುಂದುವರಿದಿದೆ ಎಂದು ಆರೋಪಿಸಲಾಗಿದ್ದು, ಇದರಿಂದ ಕೋಪಗೊಂಡು ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ.
MUST READ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಬಿಟ್ಟ ಮೂವರು ಅರೆಸ್ಟ್!

ಸ್ಥಳಕ್ಕೆ ಧಾವಿಸಿದ ಪೊಲೀಸರು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ಪೊಲೀಸ್ ವಶಕ್ಕೆ
ಪ್ರಕರಣ ಸಂಬಂಧ ಆರೋಪಿ ಪ್ರಕಾಶ್ ಕರಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಘಟನೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
MUST WATCH : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಚಿಕಿತ್ಸೆಗಾಗಿ ಬಡ ರೋಗಿಗಳ ಪರದಾಟ | SIRA NEWS |




