ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ Murder ಮಾಡಿದ ಪತಿ!

ಇತ್ತೀಚಿನ ದಿನಗಳಲ್ಲಿ ಕೊಲೆ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲವೊಂದು ಅನುಮಾನಗಳು ಕೊಲೆಯಲ್ಲಿ ಅಂತ್ಯವಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ.!
ಅಂತಹದ್ಧೇ ಘಟನೆಯೊಂದು ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೌದು. ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ Murder ಮಾಡಿರುವ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಭುವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಆರೋಪದ ಮೇಲೆ ಪತಿ ಬಸವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : ನಾಯಿ ಮೂತ್ರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಕೊಡಲಿಯೊಂದ ಹಲ್ಲೆ ಮಾಡಿ Murder
ಮೃತ ಮಹಿಳೆಯನ್ನು 35 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ. ಪತಿ ಬಸವರಾಜ್ಗೆ ಪತ್ನಿಯ ಮೇಲೆ ಅನುಮಾನವಿದ್ದು, ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತಂತೆ. ಇನ್ನು ಜಗಳ ತಾರಕಕ್ಕೇರಿ ಬಸವರಾಜ್ ಕೊಡಲಿಯಿಂದ ಶಶಿಕಲಾಳ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ.
ಪತಿ ಬಸವರಾಜ್ ಬಂಧನ
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಎಸ್ಪಿ ಜಾಹ್ನವಿ ಹಾಗೂ ಡಿವೈಎಸ್ಪಿ ಮುರುಳಿಧರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಬಸವರಾಜ್ನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಮಧುಗಿರಿಯಲ್ಲಿ ರಸ್ತೆಯಲ್ಲೇ ಗಾಂಜಾ ಮಾರಾಟ – ಮೂವರ ವಿರುದ್ಧ ಎಫ್ಐಆರ್..!


