Suicide : ಪತ್ನಿಯಿಂದ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಪತಿ ನೇಣಿಗೆ ಶರಣು

ಪತ್ನಿಯಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಹರಿಜನ ಕಾಲೋನಿಯಲ್ಲಿ ನಡೆದಿದೆ. 39 ವರ್ಷದ ಸಂತೋಷ್ ಅಳ್ಳೂರು Suicide ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಕುಟುಂಬದ ಕಲಹದ ಹಿನ್ನೆಲೆ ಸಂತೋಷ್ ಅವರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂತೋಷ್ ಅವರನ್ನು ಠಾಣೆಗೆ ಕರೆಸಿ ಕಿರುಕುಳ ನೀಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದ್ರಿಂದ ಮನನೊಂದ ಸಂತೋಷ್ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ಕಾಲೇಜ್ ಫೀಸ್ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

ಪತ್ನಿಯಿಂದಲೇ ಕಿರುಕುಳ ಆರೋಪ
ಸುಮಾರು 18 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಸಂತೋಷ್ ಮತ್ತು ಅವರ ಪತ್ನಿಗೆ ಮೂವರು ಮಕ್ಕಳಿದ್ದಾರೆ. ಪತ್ನಿಗೆ ಅಂಗನವಾಡಿಯಲ್ಲಿ ಉದ್ಯೋಗ ದೊರಕಿಸಲು ಸಂತೋಷ್ ಸಹಕಾರ ನೀಡಿದ್ದರು ಎನ್ನಲಾಗಿದೆ. ಆದರೆ ಉದ್ಯೋಗ ಖಾಯಂ ಆದ ಬಳಿಕ ದಂಪತಿಯ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದವು. ಇದೇ ವಿಚಾರವಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.
ಪತಿ Suicide – ಪತ್ನಿ ಮತ್ತು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಇದರ ನಡುವೆ ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಪತಿಯೊಂದಿಗೆ ಸಂಸಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಈ ಬೆಳವಣಿಗೆ ಹಿನ್ನಲೆ ಮನನೊಂದ ಸಂತೋಷ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪತ್ನಿ ಹಾಗೂ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಗೊಡ್ಡು ಬೆದರಿಕೆಗೆಲ್ಲಾ ನಾವು ಹೆದರಲ್ಲ- ಪೋಸ್ಟರ್ ರಾಜಕೀಯಕ್ಕೆ VIJAYENDRA ತಿರುಗೇಟು..!




