
SUICIDE : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕಣ್ಣೀರಿಡುತ್ತಾ ವಿಷ ಕುಡಿದ ಪತಿ!
ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ವಿಡಿಯೋ ಮಾಡಿಟ್ಟು ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ನಡೆದಿದೆ.
ಆಗಿದ್ದೇನು..?
ಮೃತರನ್ನು ಬೆಳಗಿಹಳ್ಳಿ ಗ್ರಾಮದ ದೊರೆ (27) ಎಂದು ಗುರುತಿಸಲಾಗಿದೆ. ದೊರೆ ಅವರು ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ರು. ಕಳೆದ 15 ದಿನಗಳ ಹಿಂದೆ ಪತ್ನಿ ಮನೆ ಬಿಟ್ಟು ತವರು ಮನೆಗೆ ಸೇರಿದ್ದಳು ಎನ್ನಲಾಗಿದೆ.
READ THIS : ಶಿರಾದಲ್ಲಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ!

ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದ ಪತಿ
SUICIDE ಮಾಡಿಕೊಳ್ಳುವ ಮುನ್ನ ದೊರೆ ಅವರು ಸೆಲ್ಫಿ ವಿಡಿಯೋವೊಂದನ್ನು ಮಾಡಿದ್ದು, ಅದರಲ್ಲಿ ಪತ್ನಿಗೆ ಪರಪುರುಷನ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾನೆ. ಈ ವಿಚಾರ ಪತ್ನಿಯ ಪೋಷಕರಿಗೂ ತಿಳಿದಿದ್ದರೂ ತಮ್ಮ ಮಗಳ ಪರವಾಗಿ ಮಾತನಾಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ದೊರೆ ಹೇಳಿದ್ದಾರೆ.
ತಾನು ಪತ್ನಿಯನ್ನು ಪ್ರೀತಿಯಿಂದ ನೋಡಿಕೊಂಡಿದ್ದರೂ ಆಕೆ ತನಗೆ ದ್ರೋಹ ಮಾಡಿದ್ದಾಳೆ ಎಂದು ಆರೋಪಿಸಿರುವ ದೊರೆ, ತನ್ನ ಮೇಲೆ ಮಾಟ-ಮಂತ್ರ ಮಾಡಿಸಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.

SUICIDE – ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
ವಿಡಿಯೋದಲ್ಲಿ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿರುವ ದೊರೆ, ಪತ್ನಿಯ ಮೊಬೈಲ್ ಕರೆ ದಾಖಲೆಗಳನ್ನು ಪರಿಶೀಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ವಿಡಿಯೋ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
MUST WATCH : ಕತ್ತೆ ಹಾಲಿಗೆ ಭಾರೀ ಡಿಮ್ಯಾಂಡ್ – ರೇಟ್ ಕೇಳಿದ್ರೆ ಶಾಕ್ ಆಗ್ತೀರಾ




