ಖಾತೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ – Byrathi Suresh.

ಖಾತೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ಸಚಿವ ಬೈರತಿ ಸುರೇಶ್ ( Byrathi Suresh ) ತಿಳಿಸಿದ್ದಾರೆ.
ಮಂತ್ರಿ ಸ್ಥಾನ ಕೊಟ್ಟಿದ್ದಾರೆ – ಸಮರ್ಥವಾಗಿ ನಿಭಾಯಿಸುವ ಶಕ್ತಿ ದೇವರು ಕೊಡುವ ವಿಶ್ವಾಸ
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್, CM ಡಿಕೆಶಿ, ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಸಚಿವ ಸ್ಥಾನ ದೊರೆತಿದೆ. ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ದೇವರು ಕೊಡುವ ವಿಶ್ವಾಸ ಇದೆ ಎಂದು ಹೇಳಿದರು.

ಹೈಕಮಾಂಡ್, ಕಾಂಗ್ರೆಸ್ಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ
ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ಹೊಸ ಯೋಜನೆಗಳನ್ನು ಜಾರಿಗೆ ತಂದು ಉತ್ತಮವಾಗಿ ಕೆಲಸ ಮಾಡಿದ್ದೇನೆ. ಅದೇ ರೀತಿಯಲ್ಲಿ ಈಗ ಸಾರಿಗೆ ಇಲಾಖೆಯಲ್ಲೂ ಪರಿಣಾಮಕಾರಿ ಕಾರ್ಯನಿರ್ವಹಣೆ ಮಾಡುವೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಶ್ರಮಿಸುವೆ ಎಂದು ತಿಳಿಸಿದರು.
ಖಾತೆ ಬಗ್ಗೆ ನನಗೇನು ಬೇಸರ ಇಲ್ಲ
ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡೋರು ನಮ್ಮ ಕರ್ನಾಟಕದವರೇ. ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾ ರೆಡ್ಡಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇಲಾಖೆ ಸಮಸ್ಯೆ ಪರಿಹಾರ ಮಾಡುವ ಕೆಲಸ ಮಾಡುತ್ತೇನೆ. ಖಾತೆ ಬಗ್ಗೆ ನನಗೇನು ಬೇಸರ ಇಲ್ಲ. ಯಾವುದೇ ಇಲಾಖೆ ಕೊಟ್ಟರೂ ಸಂತೋಷವಾಗಿ ಕೆಲಸ ಮಾಡುತ್ತೇನೆ. ನಮ್ಮ ನಾಯಕರು, ಹೈಕಮಾಂಡ್ ನಾಯಕರು ಎಲ್ಲರೂ ಯೋಚನೆ ಮಾಡಿ ಇಷ್ಟು ದೊಡ್ಡ ಖಾತೆ ಕೊಟ್ಟಿದ್ದಾರೆ. ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಇದನ್ನು ಓದಿ : ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಕಳವು!

ಜಮೀರ್ಗೆ ಮಂತ್ರಿ ಸ್ಥಾನ ಕೊಡುವ ವಿಚಾರವಾಗಿ Byrathi Suresh ಹೇಳಿದ್ದೇನು?
ಇನ್ನೊಂದೆಡೆ, ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಗೊಳ್ಳುತ್ತಾರೆ. ಸಚಿವ ಸ್ಥಾನ ಕೇಳುವುದು ಶಾಸಕರು ಹಾಗೂ ಮಾಜಿ ಸಚಿವರ ಹಕ್ಕು. ಆದರೆ ಅಂತಿಮ ತೀರ್ಮಾನವನ್ನು ಪಕ್ಷದ ನಾಯಕತ್ವವೇ ಮಾಡುತ್ತದೆ ಎಂದು ಹೇಳಿದರು.

ಇದನ್ನು ನೋಡಿ : ನಿಶ್ಚಿತಾರ್ಥಕ್ಕೆ ತೆರಳ್ತಿದ್ದಾಗ ಕಾರು ಪಲ್ಟಿ – ಸ್ಥಳದಲ್ಲೇ ಇಬ್ಬರ ಸಾ*, ಹಲವರಿಗೆ ಗಾಯ.!




