
ಜೈಲು ಪಾಲಾಗಿದ್ದ IAS ಅಧಿಕಾರಿಗೆ ಶಾಕ್ – ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ!
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರಿಗೆ ಸದ್ಯಕ್ಕೆ ಜಾಮೀನು ದೊರೆತಿಲ್ಲ. ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಜೈಲು ಪಾಲಾಗಿದ್ದ IAS ಅಧಿಕಾರಿಗೆ ಶಾಕ್
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದು, ತನಿಖೆಯ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಜಾಮೀನು ಕೋರಿ ಗ್ಯಾನೇಂದ್ರ ಕುಮಾರ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
READ THIS : KPSC ಹಗರಣ – ಬಸವರಾಜ್ ಕನ್ನಾಳೆ ಮನೆಯನ್ನೇ ಜಪ್ತಿ ಮಾಡಿದ ಸಿಐಡಿ!

ಬಸವರಾಜ್ ಕನ್ನಾಳೆ ಕೂಡ ಜೈಲು ಪಾಲು!
ಈ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾನೇಂದ್ರ ಕುಮಾರ್ ಅವರಷ್ಟೇ ಅಲ್ಲದೆ, ಬಿಜೆಪಿ ಮುಖಂಡ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನೂ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಇಬ್ಬರೂ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಕುರಿತು ಸಿಐಡಿ ತನಿಖೆ ಮುಂದುವರಿದಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ತನಿಖಾ ಸಂಸ್ಥೆ ಮತ್ತಷ್ಟು ಮಾಹಿತಿಯನ್ನು ಕಲೆಹಾಕುತ್ತಿದೆ.

MUST WATCH : ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಫೈಟ್ – ಷಡಕ್ಷರಿ ಸೇರಿ ಮೂವರ ಹೆಸರು ಚರ್ಚೆ




