
ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ CM ಡಿಕೆಶಿ
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಹೌದು.. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೆನ್ನಲ್ಲೇ, ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ. ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆಯಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೂ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
READ THIS : ಕೆ.ಎನ್ ರಾಜಣ್ಣ ಕೋಟೆಯಲ್ಲಿ ಯಾರಿಗೆ ಮೀಸಲಾತಿ?

ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನೆಲೆಗೆ?
ಇನ್ನು ಈ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿ ಹಾಗೂ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ನೇಮಕಾತಿ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಬಹುದಿನಗಳಿಂದ ನಿರೀಕ್ಷೆಯಲ್ಲಿರುವ ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಪಕ್ಷದ ಮುಖಂಡರ ಗಮನ ಇದೀಗ ದೆಹಲಿ ನಾಯಕರ ಸಭೆಯತ್ತ ನೆಟ್ಟಿದೆ.
ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಲೆಕ್ಕಾಚಾರ ಜೋರು
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೀಗ ಅವರ ಭೇಟಿಯ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಕೂಡ ದೆಹಲಿ ಪ್ರವಾಸ ಕೈಗೊಂಡಿರುವುದು ಹಲವು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ನ ಮುಂದಿನ ರಾಜಕೀಯ ನಿರ್ಧಾರಗಳು ಹಾಗೂ ಸಂಪುಟ ಪುನರ್ರಚನೆ ವಿಚಾರದಲ್ಲಿ ಹೈಕಮಾಂಡ್ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಹೈಕಮಾಂಡ್ ಮಟ್ಟದಲ್ಲಿ ಚರ್ಚೆ?
ಒಟ್ಟಿನಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸ ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
ನಿಗಮ–ಮಂಡಳಿ ನೇಮಕಾತಿ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಾ? ರಾಜ್ಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಯಾವ ಬೆಳವಣಿಗೆಗಳು ನಡೆಯಲಿವೆ ಅನ್ನೋದನ್ನ ನೋಡಬೇಕಿದೆ.
MUST WATCH : ಮತ್ತೆ ಅಬ್ಬರಿಸಲಿದ್ದಾನೆ ವರುಣ ನವೆಂಬರ್ 8ರವರೆಗೆ ಭಾರೀ ಮಳೆ




