
ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ – CM ಡಿಕೆ ಶಿವಕುಮಾರ್ಗೆ ಪತ್ರ
ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ, ಅಂದ್ರೆ SAP ಜಾರಿಗೊಳಿಸಬೇಕು. ರೈತರ ಪ್ರಮುಖ ಬೇಡಿಕೆಗಳಿಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಒತ್ತಾಯ
ಹೌದು.. ರಾಜ್ಯದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ CM ಡಿಕೆಶಿಗೆ ಪತ್ರ ಬರೆದಿದ್ದು, ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಕಬ್ಬಿಗೆ ರಾಜ್ಯ ಸಲಹಾ ಬೆಲೆ ನಿಗದಿಪಡಿಸಿ ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರೈತ ಮುಖಂಡರೊಂದಿಗೆ ಪ್ರಲ್ಹಾದ ಜೋಶಿ ಸಭೆ
ಇನ್ನು ಅಕ್ಟೋಬರ್ 12ರಂದು ದೆಹಲಿಯಲ್ಲಿ ಕಬ್ಬು ಬೆಳೆಗಾರರು ಹಾಗೂ ರೈತ ಮುಖಂಡರೊಂದಿಗೆ ಪ್ರಲ್ಹಾದ ಜೋಶಿ ಸಭೆ ನಡೆಸಿದ್ದರು.
ಈ ವೇಳೆ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಚರ್ಚೆ ನಡೆದಿತ್ತು. ರೈತ ಮುಖಂಡರು ನೀಡಿದ ಮನವಿಯ ಆಧಾರದ ಮೇಲೆ ಇದೀಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
READ THIS : ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ; CM ಗೆ ಸಚಿವ ಪ್ರಲ್ಹಾದ ಜೋಶಿ ಖಡಕ್ ಪತ್ರ
ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು
ಮತ್ತೊಂದೆಡೆ ಕಬ್ಬಿನ ಸಕ್ಕರೆ ಇಳುವರಿ ಪ್ರಮಾಣವನ್ನು ಸ್ವತಂತ್ರವಾಗಿ ಪರಿಶೀಲಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳಲ್ಲಿ ಬಳಸುವ ತೂಕದ ಯಂತ್ರಗಳ ಪರಿಶೀಲನೆ ಪಾರದರ್ಶಕವಾಗಿ ನಡೆಯಬೇಕು.
ಕಬ್ಬಿನ ತೂಕ ಹಾಗೂ ಇಳುವರಿ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬೆಳೆಗಾರರ ವಿವಿಧ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು
ಇನ್ನು ಯಂತ್ರಗಳ ಮೂಲಕ ಕಬ್ಬು ಕೊಯ್ಲು ನಡೆಸುವ ಸಂದರ್ಭದಲ್ಲಿ ಶೇಕಡಾ 8ರಷ್ಟು ಕಡಿತ ಮಾಡುತ್ತಿರುವ ಪದ್ಧತಿಯನ್ನು ಮರುಪರಿಶೀಲಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ಈ ಕಡಿತದಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಜೊತೆಗೆ ರಾಜ್ಯ ಸಲಹಾ ಬೆಲೆ ಘೋಷಣೆ ಸೇರಿದಂತೆ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಕಬ್ಬು ಬೆಳೆಗಾರರ ಸಮಸ್ಯೆಗಳ ಅಧ್ಯಯನಕ್ಕಾಗಿ ಕೇಂದ್ರದಿಂದ ಜಂಟಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಲಾಗಿದೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸುವ ಪ್ರಕ್ರಿಯೆಯ ಜೊತೆಗೆ ರಾಜ್ಯ ಸರ್ಕಾರವೂ ತನ್ನ ವ್ಯಾಪ್ತಿಯಲ್ಲಿರುವ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂಬುದು ಸಚಿವರ ಒತ್ತಾಯವಾಗಿದೆ.

MUST WATCH : SRIRANGAPATANA ದಸರಾಗೆ ಕ್ಷಣಗಣನೆ – ಜಂಬೂ ಸವಾರಿಗೆ ಸಕಲ ಸಿದ್ಧತೆ




