ಎಚ್ಚರಿಕೆ ನಡುವೆಯೂ ಹೆಚ್ಚಿದ Drink And Drive ಕೇಸ್ – ಬೆಂಗಳೂರಿನಲ್ಲಿ 562 ಪ್ರಕರಣ ಪತ್ತೆ!

ಎಷ್ಟೇ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆದರೂ ಮದ್ಯಪಾನ ಮಾಡಿ ವಾಹನ ಚಾಲನೆ (Drink And Drive) ಮಾಡುವ ಪ್ರಕರಣಗಳು ನಗರದಲ್ಲಿ ಇನ್ನೂ ಕಡಿಮೆಯಾಗಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

56,298 ವಾಹನಗಳನ್ನು ಪರಿಶೀಲನೆ
ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವಾರ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 56,298 ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ.
ಪರಿಶೀಲನೆ ವೇಳೆ 562 ಮಂದಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ಮದ್ಯ ಮಾರಾಟದಲ್ಲಿ ದಾಖಲೆ – ಅಬಕಾರಿ ಇಲಾಖೆಗೆ ಬಂದ ಆದಾಯ ಎಷ್ಟು?

ವೇಗ ವಾಹನ ಚಲಾಯಿಸಿದ 65 ಸವಾರರ ವಿರುದ್ಧವೂ ಪ್ರಕರಣ
ಇದರ ಜೊತೆಗೆ ಅತಿ ವೇಗದಲ್ಲಿ ವಾಹನ ಚಲಾಯಿಸಿದ 65 ಸವಾರರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ವೇಗ ಮಿತಿಯನ್ನು ಮೀರಿ ವಾಹನ ಚಲಾಯಿಸುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗಿರುವುದರಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಮ ಉಲ್ಲಂಘಿಸಿದವರಿಂದ 65 ಸಾವಿರ ರೂಪಾಯಿ ದಂಡ
ಈ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿದವರಿಂದ ಒಟ್ಟು 65 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ರಸ್ತೆ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ನಡೆಯಲಿವೆ ಎಂದು ಸಂಚಾರ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನು ನೋಡಿ : ಗುಂಡಿ ನಗರವಾಗ್ತಿದ್ಯಾ ತುಮಕೂರು – ಗುಂಡಿಗಳ ಹಾವಳಿಗೆ ಜನ ಕಂಗಾಲು




