IND vs AFG : ಅಫ್ಘಾನಿಸ್ತಾನ ವಿರುದ್ಧಧ ಏಕದಿನ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಔಟ್!

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜೂನ್ 13ರಿಂದ ಆರಂಭವಾಗಲಿದ್ದು, ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಸರಣಿಯಿಂದ ಹೊರಬಿದ್ದಿದ್ದಾರೆ.

ಏಕದಿನ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಔಟ್!
2026ರ ಐಪಿಎಲ್ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಬಳಿಕ ಚೇತರಿಸಿಕೊಂಡು ಮತ್ತೆ ತಂಡಕ್ಕೆ ಮರಳಿದ್ದ ಪಾಂಡ್ಯ, ಇದೀಗ ಮತ್ತೊಮ್ಮೆ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಕಾಲು ಉಳುಕಿದ್ದು, ಇದೇ ಕಾರಣದಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಹೊರಗಿಡಲಾಗಿದೆ ಎಂದು ತಿಳಿದುಬಂದಿದೆ.
ಏಕದಿನ ಸರಣಿಗೆ ಮುನ್ನ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿದ್ದ ಪಾಂಡ್ಯ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಸರಣಿಯಿಂದ ದೂರವಿರಿಸಲು ತಂಡದ ನಿರ್ವಹಣೆ ತೀರ್ಮಾನಿಸಿದೆ ಎನ್ನಲಾಗಿದೆ.
ಇದನ್ನು ಓದಿ : ರಾಷ್ಟ್ರಧ್ವಜಕ್ಕೆ ಅವಮಾನ – Hardik Pandya ವಿರುದ್ಧ ದೂರು!

ಪಾಂಡ್ಯ ಪ್ರಸ್ತುತ ಬೆಂಗಳೂರಿನಲ್ಲಿ
ಗಾಯದಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಮುಂದಿನ ಎರಡು ವಾರಗಳ ಕಾಲ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಪುನಶ್ಚೇತನ ಚಿಕಿತ್ಸೆ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಾಂಡ್ಯ ಬೆಂಗಳೂರಿನಲ್ಲಿರುವ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿವೆ. ಇನ್ನು ಹಾರ್ದಿಕ್ ಪಾಂಡ್ಯ ಬದಲಿಗೆ ಬಿಸಿಸಿಐ ಯಾವುದೇ ಆಟಗಾರನನ್ನು ತಂಡಕ್ಕೆ ಸೇರ್ಪಡೆಗೊಳಿಸಿಲ್ಲ. ಹೀಗಾಗಿ ತಂಡದ ಮುಂದಿನ ನಿರ್ಧಾರದತ್ತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಸರಣಿಯ ವೇಳಾಪಟ್ಟಿಯಂತೆ ಜೂನ್ 13ರಂದು ಧರ್ಮಶಾಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಜೂನ್ 17ರಂದು ಲಕ್ನೋದಲ್ಲಿ ಎರಡನೇ ಪಂದ್ಯ ಹಾಗೂ ಜೂನ್ 20ರಂದು ಚೆನ್ನೈನಲ್ಲಿ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ.
ಇದನ್ನು ನೋಡಿ : ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ – ಮಕ್ಕಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ




