IND VS SA : ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಹೀನಾಯವಾಗಿ ಸೋತಿದೆ.

ಭಾರತ ತಂಡವು ದಕ್ಷಿಣ ಆಫ್ರಿಕಾದ ವಿರುದ್ಧ ಎರಡನೇ ಟೆಸ್ಟ್ನಲ್ಲಿ ಭಾರೀ ಸೋಲು ಅನುಭವಿಸಿದೆ. ಟೀಂ ಇಂಡಿಯಾ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಗೆ 408 ರನ್ಗಳ ಭಾರೀ ಅಂತರದಿಂದ ಸೋಲು ಕಂಡಿದ್ದು, ಸರಣಿಯಲ್ಲಿ ವೈಟ್ವಾಶ್ನ ಅಪಮಾನಕ್ಕೂ ಮುಡುಪಾಗಿತು.
489 ರನ್ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ
ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 151.1 ಓವರ್ಗಳಲ್ಲಿ 489 ರನ್ಗಳ ಗುರಿ ನೀಡಿತು. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 83.1 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 201 ರನ್ಗಳಿಗೆ ಶಕ್ತವಾಯಿತು. ಇದರಿಂದ ಭಾರತವು 288 ರನ್ಗಳ ಹಿನ್ನಡೆ ಅನುಭವಿಸಿತು.
ಇದನ್ನು ಓದಿ : Koppal News|ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ ಪೋಕ್ಸೋ ಪ್ರಕರಣ ದಾಖಲು

ದಕ್ಷಿಣ ಆಫ್ರಿಕಾಗೆ 548 ರನ್ಗಳ ಮುನ್ನಡೆ
ಭಾರತಕ್ಕೆ ಫಾಲೋ-ಆನ್ ಅವಕಾಶ ದೊರೆತರೂ, ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್ ಆರಂಭಿಸಿ 5 ವಿಕೆಟ್ಗಳಿಗೆ 260 ರನ್ಗಳನ್ನು ಸೇರಿಸಿಕೊಂಡು ಡಿಕ್ಲೇರ್ ಮಾಡಿತು. ಈ ಮೂಲಕ ದಕ್ಷಿಣ ಆಫ್ರಿಕಾಗೆ 548 ರನ್ಗಳ ಮುನ್ನಡೆ ಸಿಕ್ಕಿತು.
ವಿಕೆಟ್ ಕಳೆದುಕೊಂಡು ಸೋಲು
ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ತಂಡ 140 ರನ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಸೋಲನ್ನು ಸ್ವೀಕರಿಸಿತು. ಈ ಮೂಲಕ ದಕ್ಷಿಣ ಆಫ್ರಿಕಾ 408 ರನ್ಗಳ ಅಂತರದಿಂದ ಗೆಲುವು ಸಾಧಿಸಿತು. ಎರಡು ಟೆಸ್ಟ್ಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದೆ.

ಇದನ್ನು ನೋಡಿ : IAS ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ ರಾಮದುರ್ಗದಲ್ಲಿ ಮುಗಿಲು ಮುಟ್ಟಿದ ಆಕ್ರಂದನ




