
ಅಪ್ರಾಪ್ತೆ ಜೊತೆಗೆ ಅಸಭ್ಯ ವರ್ತನೆ : Hubballi ಯಲ್ಲಿ ಕಾಮುಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆಯರು.!
ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಕಾಮುಕನೊಬ್ಬನಿಗೆ ಸ್ಥಳೀಯ ಮಹಿಳೆಯರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿ ಧರ್ಮದೇಟು ನೀಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸ್ತಿದ್ದ ಆರೋಪಿ!
ಮಜೀದ್ ನದಾಫ್ ಆರೋಪಿಯಾಗಿದ್ದು, ಸ್ಥಳೀಯ ಬಾಲಕ-ಬಾಲಕಿಯರಿಗೆ ಹಣ ನೀಡಿ ಗುಟ್ಕಾ ತರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮಕ್ಕಳನ್ನು ಮನೆಗೆ ಕರೆಸಿಕೊಂಡು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದ ಆರೋಪವೂ ಕೇಳಿಬಂದಿದೆ.
READ THIS : ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್..!!

ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿತ
ಇತ್ತೀಚೆಗೆ ಅಪ್ರಾಪ್ತ ಬಾಲಕಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸಲು ಮಜೀದ್ ಯತ್ನಿಸಿದ್ದಾನೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಆತನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Hubballi – ಆರೋಪಿ ಅರೆಸ್ಟ್!
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಹಳೇ Hubballi ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮಜೀದ್ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
MUST WATCH : ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು – ಹುಬ್ಬಳ್ಳಿಯ ಹೋಟೆಲ್ ನಲ್ಲಿ ಚಿಕಿತ್ಸೆ




