
JOB ALERT : ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ – 2027ರ ಬ್ಯಾಚ್ಗೆ ಅರ್ಜಿ ಆಹ್ವಾನ!
ಭಾರತೀಯ ಕರಾವಳಿ ರಕ್ಷಕ ಪಡೆಗೆ ಸೇರಿ ದೇಶಸೇವೆ ಮಾಡಬೇಕೆಂಬ ಕನಸು ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇಂಡಿಯನ್ ಕೋಸ್ಟ್ ಗಾರ್ಡ್ನ 2027ರ ಬ್ಯಾಚ್ನ ನೊಂದಾಯಿತ ಸಿಬ್ಬಂದಿ ಹುದ್ದೆಗಳ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕಟಣೆಯ ಪ್ರಕಾರ ಅಕ್ಟೋಬರ್ 6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 21ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ.
ಅಕ್ಟೋಬರ್ 6ರಿಂದ ಆನ್ಲೈನ್ ನೋಂದಣಿ ಆರಂಭ
ಹೌದು.. ನೇಮಕಾತಿಗೆ ಸಂಬಂಧಿಸಿದ ಆನ್ಲೈನ್ ನೋಂದಣಿ ಅಕ್ಟೋಬರ್ 6ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಿದ್ದು, ಅಕ್ಟೋಬರ್ 21ರಂದು ಸಂಜೆ 5 ಗಂಟೆ 30 ನಿಮಿಷಕ್ಕೆ ಮುಕ್ತಾಯವಾಗಲಿದೆ ಎಂದು ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅಧಿಕೃತ ಅಧಿಸೂಚನೆ ಪರಿಶೀಲಿಸಿ ಅರ್ಜಿ ಸಲ್ಲಿಸಿ
ಇನ್ನು ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿಯ ಸವಿಸ್ತಾರವಾದ ಅಧಿಸೂಚನೆಯನ್ನು ಪರಿಶೀಲಿಸಬೇಕು.
ವಿದ್ಯಾರ್ಹತೆ, ವಯೋಮಿತಿ, ಪರೀಕ್ಷಾ ವಿಧಾನ, ಅಗತ್ಯ ದಾಖಲೆಗಳು ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಸೂಚನೆಗಳನ್ನು ಓದಿಕೊಂಡು ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಮಾಹಿತಿಯನ್ನೇ ಅಂತಿಮವಾಗಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.
READ THIS : ಬಂಪರ್ ಜಾಬ್ ಆಫರ್, ಕೆನರಾ ಬ್ಯಾಂಕ್ನಲ್ಲಿ ಬರೋಬ್ಬರಿ 3500 ಹುದ್ದೆಗಳಿಗೆ ಅರ್ಜಿ ಆಹ್ವಾನ!
ನೇಮಕಾತಿ ಹೆಸರಿನಲ್ಲಿ ಮಧ್ಯವರ್ತಿಗಳಿಂದ ಎಚ್ಚರ
ಮತ್ತೊಂದೆಡೆ ನೇಮಕಾತಿ ಹೆಸರಿನಲ್ಲಿ ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುವ ಏಜೆಂಟ್ಗಳು ಹಾಗೂ ಮಧ್ಯವರ್ತಿಗಳ ಬಗ್ಗೆ ಅಭ್ಯರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಅಭ್ಯರ್ಥಿಗಳ ಅರ್ಹತೆ ಹಾಗೂ ನಿಗದಿತ ಆಯ್ಕೆ ಪ್ರಕ್ರಿಯೆಯ ಆಧಾರದ ಮೇಲೆಯೇ ನೇಮಕಾತಿ ನಡೆಯಲಿದೆ. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಕರಾವಳಿ ರಕ್ಷಕ ಪಡೆಯ ನೇಮಕಾತಿ ನಿರ್ದೇಶನಾಲಯವನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
JOB ALERT – ಅರ್ಜಿ ಸಲ್ಲಿಕೆಗೆ ಮುನ್ನ ಅಧಿಕೃತ ವೆಬ್ಸೈಟ್ ಪರಿಶೀಲಿಸಿ
ಒಟ್ಟಿನಲ್ಲಿ ಭಾರತೀಯ ಕರಾವಳಿ ರಕ್ಷಕ ಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಪ್ರಕಟಣೆ ಮಹತ್ವದ್ದಾಗಿದೆ.
ಆದರೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಯ ವಿವರ, ಅಧಿಕೃತ ಅರ್ಜಿ ಲಿಂಕ್ ಹಾಗೂ ಕೊನೆಯ ದಿನಾಂಕವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ.
MUST WATCH : ಗೌರಿಬಿದನೂರಲ್ಲಿ ಪಾರ್ಕಿಂಗ್ ಕಿರಿಕ್ – 30ಕ್ಕೂ ಹೆಚ್ಚು ಬೈಕ್ಗಳಿಗೆ ದಂಡ




