ಅತ್ಯಾಚಾರ, ಬೆದರಿಕೆ ಆರೋಪದಡಿ ಕ್ರಿಕೆಟಿಗ Abishek Porel ಅರೆಸ್ಟ್

ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ಹಲವು ಆರೋಪಗಳಡಿ ಬಂಗಾಳದ ಕ್ರಿಕೆಟಿಗ ಹಾಗೂ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕೋಲ್ಕತಾ ಹೈಕೋರ್ಟ್ Abishek Porel ಅವರನ್ನು ಶೀಘ್ರವಾಗಿ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬಂಧನಕ್ಕೆ ಕಾರಣ ಏನು?
ಹೂಗ್ಲಿ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಭೂಷಣ್ ಸಿಂಗ್ ಬಂಧನವನ್ನು ಖಚಿತಪಡಿಸಿದ್ದು, ದಮ್ ದಮ್ ಪೊಲೀಸ್ ಠಾಣಾ ವ್ಯಾಪ್ತಿಯ ಎಮಾಮಿ ಸಿಟಿಯಿಂದ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಟೀಂ ಇಂಡಿಯಾದ ಅಂಡರ್-19 ವಿಶ್ವಕಪ್ ವಿಜೇತ ಸ್ಟಾರ್ ಬಂಧನ

ಸಂತ್ರಸ್ತೆ ಮಾಡಿರುವ ಆರೋಪವೇನು?
ದೂರಿನಲ್ಲಿ ಸಂತ್ರಸ್ತೆ, ತಾನು ಹಾಗೂ ಅಭಿಷೇಕ್ ಪೊರೆಲ್ ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆವು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಪೊರೆಲ್ ತಮ್ಮಿಂದ ದೂರವಾಗಲು ಆರಂಭಿಸಿದ್ದರು ಎಂದು ಆರೋಪಿಸಿದ್ದಾರೆ.
ಆರಂಭದಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ ಬಳಿಕ ಮದುವೆಯಾಗಲು ನಿರಾಕರಿಸುತ್ತಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ತಮ್ಮೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು. ಅಲ್ಲದೆ, ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಗಳನ್ನು ತಳ್ಳಿಹಾಕಿದ Abishek Porel
ಇನ್ನೊಂದೆಡೆ, ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಅಭಿಷೇಕ್ ಪೊರೆಲ್ ತಳ್ಳಿಹಾಕಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನು ನೋಡಿ : ತಾಕತ್ತಿದ್ರೆ ಡಿಕೆಶಿ ಮನೆಮುಂದೆ ಪ್ರತಿಭಟಿಸು – ಗುಬ್ಬಿ ವಾಸಣ್ಣಗೆ ದಿಲೀಪ್ ಕುಮಾರ್ ಸವಾಲ್.!





