IPS ಅಧಿಕಾರಿ ಸೋನಿಯಾ ನಾರಂಗ್ ಅವರ ಕೇಂದ್ರ ನಿಯೋಜನೆ ಅವಧಿಯನ್ನು ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ.

ಕರ್ನಾಟಕ ಕೇಡರ್ನ ಖಡಕ್ ಹಾಗೂ ದಕ್ಷ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ (Sonia Narang) ಅವರ ಕೇಂದ್ರ ನಿಯೋಜನೆ ಅವಧಿಯನ್ನು ಕೇಂದ್ರ ಸರ್ಕಾರ ಮತ್ತೊಂದು ವರ್ಷದವರೆಗೆ ವಿಸ್ತರಿಸಿದೆ. ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಇನ್ಸ್ಪೆಕ್ಟರ್ ಜನರಲ್ (IG) ಆಗಿ ಸೇವೆ ಸಲ್ಲಿಸುತ್ತಿರುವ ಸೋನಿಯಾ ನಾರಂಗ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಕ್ಯಾಬಿನೆಟ್ನ ನೇಮಕಾತಿ ಸಮಿತಿ (ACC) ಅಸ್ತು ಎಂದಿದೆ.

ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ!
2002ರ ಬ್ಯಾಚ್ನ ಕರ್ನಾಟಕ ಕೇಡರ್ IPS ಅಧಿಕಾರಿಯಾಗಿರುವ ಸೋನಿಯಾ ನಾರಂಗ್ ಅವರು ರಾಜ್ಯದಲ್ಲಿ ಲೋಕಾಯುಕ್ತ ಎಸ್ಪಿ ಹಾಗೂ ಸಿಐಡಿ ಡಿಐಜಿ ಆಗಿ ಕಾರ್ಯನಿರ್ವಹಿಸುವ ವೇಳೆ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದು ಗಮನ ಸೆಳೆದಿದ್ದರು. ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಜಾಲ ಹಾಗೂ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಪತ್ತೆಹಚ್ಚಿದ ಅಧಿಕಾರಿಯಾಗಿ ಅವರು ಹೆಸರು ಮಾಡಿದ್ದರು.

IPS ಅಧಿಕಾರಿ – ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿ
ಇನ್ನು 2016ರಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ ಸೋನಿಯಾ ನಾರಂಗ್ ಅವರು ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ (ED) ಸೇರಿದಂತೆ ದೇಶದ ಪ್ರಮುಖ ತನಿಖಾ ಸಂಸ್ಥೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ : ರಸ್ತೆಯಲ್ಲೇ ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಇದೆಂಥಾ ಹಲ್ಲೆ.!

ಕೇಂದ್ರ ನಿಯೋಜನೆ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ
ಇದೀಗ ಸಿಐಎಸ್ಎಫ್ನಲ್ಲಿ ಅವರ ಸೇವಾವಧಿ ಮತ್ತೊಮ್ಮೆ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ, ಒಟ್ಟು 13 ವರ್ಷಗಳ ಕಾಲ ಅವರು ಕೇಂದ್ರ ನಿಯೋಜನೆಯಲ್ಲೇ ಸೇವೆ ಸಲ್ಲಿಸಿದಂತಾಗಿದೆ. ಆಡಳಿತ ಹಾಗೂ ತನಿಖಾ ಕ್ಷೇತ್ರದಲ್ಲಿ ಅವರ ಅನುಭವ ಮತ್ತು ಕಾರ್ಯಕ್ಷಮತೆಯನ್ನು ಗಮನದಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




