ಬಿಜೆಪಿಯೊಂದಿಗೆ ವೈಮಸ್ಸು? ಹೊಸ ಪಕ್ಷ ಸ್ಥಾಪಿಸುತ್ತಾರಾ Annamalai ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೊಸ ರಾಜಕೀಯ ಹಾಗೂ ಸಾಮಾಜಿಕ ಚಳವಳಿಯನ್ನು ಆರಂಭಿಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾನ ಮನಸ್ಕರನ್ನು ಒಗ್ಗೂಡಿಸಿ ಬಲಿಷ್ಠ ಸ್ವಯಂಸೇವಕರ ಬಳಗವನ್ನು ನಿರ್ಮಿಸುವ ಉದ್ದೇಶದಿಂದ ಅವರು ಹೊಸ ಸಂಘಟನೆಯೊಂದನ್ನು ಸ್ಥಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯೊಂದಿಗೆ ವೈಮಸ್ಸು?
‘ಮಕ್ಕಳ್ ಶಕ್ತಿ ಇಯ್ಯಕ್ಕಂ’ (ಜನಶಕ್ತಿ ಚಳವಳಿ) ಎಂಬ ಹೆಸರಿನಲ್ಲಿ ಈ ಸಂಘಟನೆ ಕಾರ್ಯಾರಂಭ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ತ್ರಿಭಾಷಾ ನೀತಿ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತವಾದ ಬೆನ್ನಲ್ಲೇ ಈ ಬೆಳವಣಿಗೆ ಗಮನ ಸೆಳೆದಿದೆ.

ತಮಿಳುನಾಡಿನ ವಿದ್ಯಾರ್ಥಿಗಳು, ಪೋಷಕರ ಮೇಲೆ ಅನಗತ್ಯ ಮಾನಸಿಕ ಒತ್ತಡ
ಇತ್ತೀಚೆಗೆ ಸಿಬಿಎಸ್ಇಯ ತ್ರಿಭಾಷಾ ನೀತಿಯನ್ನು ವಿರೋಧಿಸಿದ್ದ ಅಣ್ಣಾಮಲೈ, 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಈ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು. ಈ ನೀತಿಯಿಂದ ತಮಿಳುನಾಡಿನ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಅನಗತ್ಯ ಮಾನಸಿಕ ಒತ್ತಡ ಉಂಟಾಗುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ದೃಢ ನಾಯಕನಾಗಿ ಗುರುತಿಸಿಕೊಂಡಿದ್ದ ಅಣ್ಣಾಮಲೈ
ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ 2021ರಿಂದ 2025ರವರೆಗೆ ಬಿಜೆಪಿಯ ನೇತೃತ್ವ ವಹಿಸಿದ್ದರು. 2020ರಲ್ಲಿ ರಾಜಕೀಯ ಪ್ರವೇಶಿಸಿದ ಅಣ್ಣಾಮಲೈ, 2021ರಲ್ಲಿ ಎಲ್. ಮುರುಗನ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ದೃಢ ನಾಯಕನಾಗಿ ಗುರುತಿಸಿಕೊಂಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ಚೈತನ್ಯ ತುಂಬಿದ್ದರು. ಅವರ ಆಕ್ರಮಣಕಾರಿ ಮಾತು ಹಾಗೂ ಮಾಧ್ಯಮಗಳಲ್ಲಿ ಸಕ್ರಿಯ ಹಾಜರಾತಿಯಿಂದಾಗಿ ಕೇಂದ್ರ ನಾಯಕತ್ವವೂ ಅವರ ಅಭಿಪ್ರಾಯಗಳಿಗೆ ಮಹತ್ವ ನೀಡುತ್ತಿತ್ತು.
ಇದನ್ನು ಓದಿ : BJP ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ

ತಮಿಳುನಾಡಿನಲ್ಲಿ ಮತ್ತೆ ಎನ್ಡಿಎ ಪ್ರಚಾರಕರಾಗಿ ಅಣ್ಣಾಮಲೈ ಆಯ್ಕೆ
ಆದರೆ, ಬಳಿಕ ಕೆಲವು ವಿವಾದಾತ್ಮಕ ಹೇಳಿಕೆಗಳು ರಾಜಕೀಯವಾಗಿ ಹಿನ್ನಡೆ ಉಂಟುಮಾಡಿದವು. ದ್ರಾವಿಡ ನಾಯಕ ಸಿ.ಎನ್. ಅಣ್ಣಾದೊರೈ ಹಾಗೂ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಕುರಿತು ನೀಡಿದ ಹೇಳಿಕೆಗಳು ಮಿತ್ರಪಕ್ಷ ಎಐಎಡಿಎಂಕೆಯ ಅಸಮಾಧಾನಕ್ಕೆ ಕಾರಣವಾಗಿದ್ದವು. ಇದರ ಪರಿಣಾಮವಾಗಿ ಬಿಜೆಪಿ–ಎಐಎಡಿಎಂಕೆ ಮೈತ್ರಿ ಮುರಿದುಬಿದ್ದಿದ್ದು, ಎರಡೂ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆಯನ್ನು ಎದುರಿಸಬೇಕಾಯಿತು.
ಮರುಮೈತ್ರಿ ಮಾತುಕತೆಗಳ ವೇಳೆ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ, ತಮಿಳುನಾಡು ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ತರಬೇಕೆಂಬ ಷರತ್ತು ಮುಂದಿಟ್ಟಿದ್ದರು ಎನ್ನಲಾಗಿದೆ.
ಇದರ ಬೆನ್ನಲ್ಲೇ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಿಸಿ, ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಇದನ್ನು ನೋಡಿ : ಸಚಿವ ಸ್ಥಾನಕ್ಕಾಗಿ ಶಾಸಕರ ನಾನಾ ಸರ್ಕಸ್ ಸಚಿವ ಸ್ಥಾನಕ್ಕೆ ಯಾರ ಹೆಸರು ಫೈನಲ್ ಆಗಿದೆ




