ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ CM ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದೀಗ ಈ ನಡುವೆಯೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮುಂಬೈಗೆ ತೆರಳಿದ್ದಾರೆ.

ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆ ಹೇಗೆ ನಡೆಯಲಿದೆ?
ಸಂಬಂಧಿಕರ ಅನಾರೋಗ್ಯದ ಹಿನ್ನೆಲೆ ರಾಜ್ಯಪಾಲರು ನಿನ್ನೆ ರಾತ್ರಿ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ.

ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ತಯಾರಿ
ಇಂದು ಮಧ್ಯಾಹ್ನ 3 ಗಂಟೆಗೆ ಲೋಕ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ ರಾಜ್ಯಪಾಲರು ರಾಜ್ಯದಲ್ಲಿಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರ ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ಹೇಳಲಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ : ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆಶಿ – ಸಭೆಯಲ್ಲಿ ಸಿದ್ದು ಘೋಷಣೆ!

CM ರಾಜೀನಾಮೆ ತಕ್ಷಣವೇ ಅಂಗೀಕಾರವಾಗುವುದಿಲ್ಲ
ಸಾಂವಿಧಾನಿಕ ಪ್ರಕ್ರಿಯೆಯ ಪ್ರಕಾರ, ಮುಖ್ಯಮಂತ್ರಿಗಳ ರಾಜೀನಾಮೆ ತಕ್ಷಣವೇ ಅಂಗೀಕಾರವಾಗುವುದಿಲ್ಲ. ರಾಜ್ಯಪಾಲರು CM ಅವರನ್ನು ಖುದ್ದಾಗಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನು ನೋಡಿ : ಸ್ಥಳೀಯ ಚುನಾವಣೆಗೆ JDS ಸಿದ್ಧತೆ – ಶಿರಾದಲ್ಲಿ ಕಾರ್ಯಕರ್ತರಿಗೆ ಹೊಸ ಟಾಸ್ಕ್




