
ರಾತ್ರೋರಾತ್ರಿ ದಿಢೀರ್ ದೆಹಲಿಗೆ ಆಗಮಿಸಿದ Nagendra
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಚಿವ ಬಿ. ನಾಗೇಂದ್ರ ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದು, ಸದ್ಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಅವರು ಕಾಂಗ್ರೆಸ್ ಹೈಕಮಾಂಡ್ನ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದು, ಅವರ ದಿಢೀರ್ ದೆಹಲಿ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ದಿಢೀರ್ ದೆಹಲಿಗೆ ಆಗಮಿಸಿದ ನಾಗೇಂದ್ರ
ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರಾಜಕೀಯ ಬೆಳವಣಿಗೆಗಳು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ವಿರೋಧ ಪಕ್ಷಗಳ ಪ್ರತಿಭಟನೆಗಳ ನಡುವೆಯೇ ನಾಗೇಂದ್ರ ಅವರು ದೆಹಲಿಗೆ ತೆರಳಿರುವುದು ಮಹತ್ವ ಪಡೆದುಕೊಂಡಿದೆ.
READ THIS : ಡಿಸಿ ಕಚೇರಿ ಮುತ್ತಿಗೆಗೆ ಯತ್ನ – ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಖಾಕಿ.!

ತಮ್ಮ ಮೇಲಿನ ಆರೋಪಗಳ ಕುರಿತು ಚರ್ಚೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಹಾಗೂ ತಮ್ಮ ಮೇಲಿನ ಆರೋಪಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ. ಪಕ್ಷದ ವರಿಷ್ಠರಿಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿ, ತಮ್ಮ ನಿಲುವನ್ನು ಸ್ಪಷ್ಟಪಡಿಸುವ ನಿರೀಕ್ಷೆಯೂ ಇದೆ.

Nagendra ರಾಜೀನಾಮೆಗೆ ವಿಪಕ್ಷಗಳ ಒತ್ತಡ
ಇತ್ತ ವಿರೋಧ ಪಕ್ಷಗಳು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯ ಮುಂದುವರಿಸಿವೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಪಾದಯಾತ್ರೆ ಸೇರಿದಂತೆ ಹಲವು ಹೋರಾಟಗಳಿಗೆ ಸಜ್ಜಾಗುತ್ತಿರುವ ಸಂದರ್ಭದಲ್ಲೇ Nagendra ಅವರ ದೆಹಲಿ ಭೇಟಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಸಚಿವ ಸ್ಥಾನದ ಭವಿಷ್ಯ ಹಾಗೂ ಸರ್ಕಾರದ ಮುಂದಿನ ನಡೆಯ ಕುರಿತು ಈ ಸಭೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.
MUST WATCH : ಪಾದಯಾತ್ರೆ ಮಾಡಿದ್ರೆ ಆರೋಗ್ಯ ಚೆನ್ನಾಗಿರುತ್ತೆ – BJP ಪಾದಯಾತ್ರೆಗೆ RAMALINGAREDDY ವ್ಯಂಗ್ಯ




