
Ishan Kishan : ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (Ishan Kishan) ಅವರು ಮುಂಬರುವ ರಣಜಿ ಟ್ರೋಫಿ ಟೂರ್ನಿಗೆ ಜಾರ್ಖಂಡ್ ತಂಡದ (Jharkhan team) ನಾಯ ಕನಾಗಿ ನೇಮಕ ಗೊಂಡಿದ್ದಾರೆ. ಅಕ್ಟೋಬರ್ 15ರಿಂದ ಆರಂಭವಾಗಲಿರುವ ಈ ದೇಶೀಯ ಟೂರ್ನಿಯಲ್ಲಿ ಇಶಾನ್ ತಂಡವನ್ನು ಮುನ್ನಡೆ ಸುವುದರ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನೂ ವಹಿಸಲಿದ್ದಾರೆ.
ಇತ್ತೀಚೆಗಷ್ಟೆ ಇಶಾನ್ ಕಿಶನ್ ಅವರನ್ನು ಅಕ್ಟೋಬರ್ 1ರಿಂದ ಆರಂಭವಾಗುವ ಇರಾನಿ ಕಪ್ ಪಂದ್ಯಕ್ಕಾಗಿ ಶೇಷ ಭಾರತ (Rest of India) ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಹಾಲಿ ರಣಜಿ ಚಾಂಪಿಯನ್ ವಿದರ್ಭ ವಿರುದ್ಧ ನಡೆಯಲಿರುವ ಈ ಮಹತ್ವದ ಪಂದ್ಯದಲ್ಲಿ ಅವರು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಟೀಮ್ ಇಂಡಿಯಾ ಪರ ಈಗಾಗಲೇ 2 ಟೆಸ್ಟ್ ಪಂದ್ಯಗಳನ್ನು ಆಡಿರುವ ಇಶಾನ್, 3 ಇನಿಂಗ್ಸ್ಗಳಲ್ಲಿ ಒಟ್ಟು 78 ರನ್ ಗಳಿಸಿ ಒಂದು ಅರ್ಧಶತಕ ಬಾರಿಸಿದ್ದಾರೆ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ನಂತರ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಬಳಿಕ 2025ರ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ಗೆ ರಿಷಭ್ ಪಂತ್ಗೆ ಬದಲಿಯಾಗಿ ಆಯ್ಕೆ ಯಾಗಿದ್ದರೂ, ಗಾಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದರು.
ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಇಶಾನ್, ತಿರುಗಿ ಬರಲು ಸಜ್ಜಾಗಿದ್ದಾರೆ. ಶೇಷ ಭಾರತ ಹಾಗೂ ಜಾರ್ಖಂಡ್ ತಂಡಗಳ ನಾಯಕತ್ವದ ಮೂಲಕ ಮತ್ತೆ ಟೆಸ್ಟ್ ತಂಡಕ್ಕೆ ಮರಳುವ ದೃಢ ಪ್ರಯತ್ನ ನಡೆಸು ತ್ತಿದ್ದಾರೆ.
ಇಶಾನ್ ಕಿಶನ್ ಅವರ ಈ ಹೋರಾಟವು, ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಉತ್ತಮ ವೇದಿಕೆಯಾಗಲಿದೆ. ಟೀಮ್ ಇಂಡಿಯಾ ಅವರಿಂದ ಭವಿಷ್ಯದಲ್ಲಿ ಏನನ್ನು ನಿರೀಕ್ಷಿಸಬಹುದು ಎಂಬುದಕ್ಕೆ ಈ ಪ್ರದರ್ಶನ ದಿಕ್ಕು ತೋರಿಸಬಹುದು.




