ISRO Recruitment 2026 : ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ

ISRO Recruitment : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವ್ಯಾಪ್ತಿಯ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) 2026-27ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ 460 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವಿವಿಧ ಪದವೀಧರರಿಗೆ ಇಸ್ರೋದಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ.
ಪರೀಕ್ಷೆಯಿಲ್ಲದೆ ನೇರ ಆಯ್ಕೆ!
ಈ ನೇಮಕಾತಿಯ ವಿಶೇಷವೆಂದರೆ ಯಾವುದೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಇಲ್ಲ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ನಡೆಯಲಿರುವ ವಾಕ್-ಇನ್ ಸಂದರ್ಶನದಲ್ಲಿ ನೇರವಾಗಿ ಭಾಗವಹಿಸಬೇಕು. ಬೆಳಿಗ್ಗೆ 9.30ರಿಂದ ಸಂಜೆ 5.00ರವರೆಗೆ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು. ಒಂದು ವರ್ಷದ ತರಬೇತಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅಂಕಗಳು ಹಾಗೂ ಸಂದರ್ಶನದ ಪ್ರದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಧಿಸೂಚನೆಯ ಪ್ರಕಾರ, ಒಟ್ಟು 460 ಹುದ್ದೆಗಳಲ್ಲಿ 273 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿದ್ದು, ಆಯ್ಕೆಯಾದವರಿಗೆ ಮಾಸಿಕ ₹12,300 ಸ್ಟೈಫಂಡ್ ನೀಡಲಾಗುತ್ತದೆ. ಉಳಿದ 187 ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾಸಿಕ ₹10,900 ಸ್ಟೈಫಂಡ್ ನೀಡಲಾಗುತ್ತದೆ.
ಇದನ್ನು ಓದಿ : ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ BE ಅಥವಾ B.Tech ಪದವಿ ಪಡೆದಿರಬೇಕು.
ಹೋಟೆಲ್ ಮ್ಯಾನೇಜ್ಮೆಂಟ್ ಅಥವಾ ಕ್ಯಾಟರಿಂಗ್ ಟೆಕ್ನಾಲಜಿಯಲ್ಲಿ ಪ್ರಥಮ ದರ್ಜೆ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು.
ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಎಂಜಿನಿಯರಿಂಗ್ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಏರೋನಾಟಿಕಲ್/ಏರೋಸ್ಪೇಸ್, ಕೆಮಿಕಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್ ವಿಭಾಗದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ವಯೋಮಿತಿ
ಜುಲೈ 31, 2026ರಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ/ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಸಂದರ್ಶನ ಎಲ್ಲಿ?
ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು ಹಾಗೂ ಸ್ವಯಂ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳೊಂದಿಗೆ ಕೇರಳದ ತಿರುವನಂತಪುರಂ ಜಿಲ್ಲೆಯ ಮಣಕಾಡುವಿನ KTCT GVHSS (Girls School), VSSC Pavilion ನಲ್ಲಿ ನಡೆಯುವ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ನಮೂನೆಯನ್ನು ಸ್ಥಳದಲ್ಲೇ ಪಡೆದು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ VSSC ಅಧಿಕೃತ ವೆಬ್ಸೈಟ್ ಪರಿಶೀಲಿಸಲು ಸೂಚಿಸಲಾಗಿದೆ.
ಇದನ್ನು ನೋಡಿ : ಸಾ*ಗೂ ಮುನ್ನ ದೇವೇಗೌಡರ ಜೊತೆ ಕೊನೆ ಕ್ಷಣ ಕಳೆದ ಚೆನ್ನಮ್ಮ




