
2028 ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋದು ಖಚಿತ : ಕೆಎಸ್ ಈಶ್ವರಪ್ಪ ಘೋಷಣೆ
ಬಿಜೆಪಿ ನಾಯಕರ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ, 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಅಥವಾ ತಮ್ಮ ಮಗ ಖಚಿತವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ನನ್ನ ಮಗನಿಗೆ ಟಿಕೆಟ್ ನೀಡದೆ ಅನ್ಯಾಯ!
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ನೀಡದೆ ಬಿಜೆಪಿ ನಾಯಕರು ಅನ್ಯಾಯ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಈ ನೋವು ಹಾಗೂ ಅಸಮಾಧಾನ ಇನ್ನೂ ತಮ್ಮಲ್ಲಿ ಹಸಿರಾಗಿದೆ ಹೇಳಿದ್ದಾರೆ.
READ THIS : ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಟಿಕೆಟ್ ತಪ್ಪಿಸಿ ಮೋಸ
ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ. ವಿಜಯೇಂದ್ರ ಹಾಗೂ ಬಿ.ವೈ. ರಾಘವೇಂದ್ರ ಅವರಿಗೆ ಅವಕಾಶ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೂ ಟಿಕೆಟ್ ನೀಡಲಾಗಿದೆ. ಆದರೆ, ತಮ್ಮ ಮಗನಿಗೆ ಮಾತ್ರ ಟಿಕೆಟ್ ತಪ್ಪಿಸಿ ಮೋಸ ಮಾಡಲಾಗಿದೆ ಎಂದು ಈಶ್ವರಪ್ಪ ತೀವ್ರ ಅಸಮಾಧಾನ ಹೊರಹಾಕಿದರು.
2028 ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋದು ಖಚಿತ
ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಸ್ಪಷ್ಟನೆ ನೀಡಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಾವಾಗಲಿ ಅಥವಾ ತಮ್ಮ ಮಗನಾಗಲಿ ಕಣಕ್ಕಿಳಿಯುವುದು ಖಚಿತ ಎಂದು ಹೇಳಿದರು.

MUST WATCH : ಪಕ್ಷಾತೀತವಾಗಿ ಭಾರತ್ ಜೋಡೋ ನೋಂದಣಿ – ಸುದ್ದಿಗೋಷ್ಠಿಯಲ್ಲಿ NIKHIL RAJANNA ಹೇಳಿಕೆ




